ತಾಳಿಕೋಟೆ ಬಳಿ ಕುಸಿತದ ಭೀತಿಯಲ್ಲಿ ಡೋಣಿ ನದಿ ಸೇತುವೆ-ಸಂಚಾರ ಸ್ಥಗಿತ
ವಿಜಯಪುರ: ವಿಜಯಪುರ ಜಿಲ್ಲೆಯ ತಾಳಿಕೋಟೆ ಬಳಿ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ಸಂಖ್ಯೆ 61ರಲ್ಲಿರುವ ಡೋಣಿ ಸೇತುವೆ ಕುಸಿತದ ಹಂತ ತಲುಪಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತಾಳಿಕೋಟೆ ಪಟ್ಟಣದ ಹೊರವಲಯದ ಮಿಣಜಗಿ ಕ್ರಾಸ್ ಬಳಿ ಇರುವ ಸೇತುವೆಯ ಸ್ಪ್ಯಾನ್ ನಲ್ಲಿ ಬಿರುಕು ಬಿಟ್ಟಿದ್ದು, ಈ ಸ್ಪ್ಯಾನ್ ವಾಲಿ ಕೆಳಕ್ಕೆ ಬಿಳುವ ಸ್ಥಿತಿ ತಲುಪಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನು ಬಂದ್ ಮಾಡಲಾಗಿದ್ದು, ಸೇತುವೆ ವಾಹನ ಸವಾರರು ಮತ್ತು ಪ್ರಯಾಣಿಕರು ಪರದಾಡುವಂತಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಈ ಸೇತುವೆಯಲ್ಲಿ […]
ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ- ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳಿಗೆ ಎನ್ ಡಿ ಎ ಮಾದರಿ ತರಬೇತಿ- ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ. ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ(ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಪೊಲೀಸ್ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆಯನ್ನು […]
ಟಿಕಾಯತ್ ಪಾಕಿಸ್ತಾನದ ಏಜೆಂಟ್- ಕಾಂಗ್ರೆಸ್ ತಾಲಿಬಾನದ ಪ್ರತಿರೂಪ- ಸಿದ್ಧರಾಮಯ್ಯ ಟಿಪ್ಪು ಸುಲ್ತಾನ್ ವಂಶಸ್ಥರು- ಯತ್ನಾಳ ವಾಗ್ದಾಳಿ
ವಿಜಯಪುರ: ಸಿದ್ಧರಾಮಯ್ಯ ಟಿಪ್ಪು ಸುಲ್ತಾನ ವಂಶಸ್ಥರು. ಧರ್ಮ, ದೇಶ, ಸಂಸ್ಕೃತಿ ಬಗ್ಗೆ ಗೊತ್ತಿಲ್ಲ. ಕೇವಲ ಸ್ವಾರ್ಥಕ್ಕಾಗಿ, ಮತಬ್ಯಾಂಕ್ ಗಾಗಿ ಒಂದು ಸಮುದಾಯವನ್ನು ಸಂತೃಪ್ತಗೊಳಿಸಲು ಅವಹೇಳನಕಾರಿಯಾಗಿ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ಅವರು ಓರ್ವ ಮಾಜಿ ಸಿಎಂ, ಪ್ರತಿಪಕ್ಷದ ನಾಯಕರಾಗಿದ್ದಾರೆ. ಅವರ ಗೌರವಕ್ಕೆ ತಕ್ಕಂತೆ ನಡೆಯಬೇಕು. ತಾಲಿಬಾನಿಗಳೇನಿದ್ದರೂ ಕಾಂಗ್ರೆಸ್ಸಿನಲ್ಲಿದ್ದಾರೆ. ಕಾಂಗ್ರೆಸ್ ತಾಲಿಬಾನ್ ಪ್ರತಿರೂಪವಾಗಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದಾರೆ ವಿಜಯಪುರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ, ಬಿಜೆಪಿಯವರು […]
ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ- ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ- ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕೃಷಿ, ತೈಲ, ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ(ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅವುಗಳಿಗೆ ಹೆಚ್ಚು ಮಹತ್ವ ನೀಡಿ, ಕೈಗಾರಿಕೆ, ಕೃಷಿ, ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರಕಾರ ಉದ್ದೇಶಿಸಿದೆ. ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ .ಅಶೋಕ […]