ವಿಶ್ವ ಹೃದಯ ದಿನ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಜ್ಞೆ- ಏನು ಗೊತ್ತಾ?

ಬೆಂಗಳೂರು: ವಿಶ್ವ ಹೃದಯ ದಿನದಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಜ್ಞೆಯೊಂದನ್ನು ಕೈಗೊಂಡಿದ್ದಾರೆ.

ಆ ಪ್ರತಿಜ್ಞೆ ಏನು ಎಂದು ತಿಳಿಯುವ ಮುಂಚೆ ಬೆಂಗಳೂರಿನಲ್ಲಿ ನಡೆದ ವಿಶ್ವ ಹೃದಯ ದಿನದ ಕಾರ್ಯಕ್ರಮದ ಮಾಹಿತಿ ಇಲ್ಲಿದೆ ನೋಡಿ.

 

ಶಕ್ತಿಯುತ ದೇಹ ಮತ್ತು ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಬೆಂಗಳೂರಿನಲ್ಲಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಆಯೋಜಿಸಿದ್ದ *ಹೃದಯದಿಂದ ಬಾಂಧವ್ಯ ಬೆಳೆಸೋಣ*; ವಾಕಥಾನ್ ಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.

 

ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ‌ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ ಮನುಷ್ಯನ ಅಂಗಗಳ ಪೈಕಿ ಅತ್ಯಂತ ಪ್ರಮುಖ ಅಂಗ ಎಂದು ಹೇಳಿದ ಅವರು , ಹೃದಯಾಘಾತ ಆದಾಗ ಪ್ರಾಥಮಿಕ ಚಿಕಿತ್ಸೆ ಕುರಿತ ಮಾಹಿತಿ ಪ್ರತಿಯೊಬ್ಬರಿಗೂ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

)

ಶೇ. 60 ರಷ್ಟು ಸಂಭವಿಸುವ ಅಕಾಲಿಕ ಮರಣಗಳಲ್ಲಿ ಶೇ. 25 ರಷ್ಟು ಸಾವುಗಳು ಹೃದಯ ರೋಗದಿಂದ ಸಂಭವಿಸುತ್ತಿದೆ. ಇದನ್ನು ತಡೆಗಟ್ಟಲು ಬಿರುಸಿನ ನಡಿಗೆ ಅತ್ಯುತ್ತಮ ವ್ಯಾಯಾಮವಾಗಿದೆ. ರಾಜ್ಯದ ಜನತೆ ಪ್ರತಿದಿನ ಶ್ರಮ ಜೀವನಕ್ಕೆ ಬದ್ಧರಾಗಿರಬೇಕು. ಕನಿಷ್ಠ ಅರ್ಧ ಗಂಟೆಯಾದರೂ ಬಿರುಸಿನ ನಡಿಗೆ ಮಾಡಬೇಕು ಎಂದು ಸಿಎಂ ಸಲಹೆ ನೀಡಿದರು.ವ್ಯ

ಕ್ತಿ ಹಾಗೂ ಸಮುದಾಯದ ಆರೋಗ್ಯ ಬಹಳ ಮುಖ್ಯ. ಹೃದಯ ಸದಾ ಬಡಿಯುವ ಅಂಗ. ಇದನ್ನು ಆರೋಗ್ಯಕರವಾಗಿಡುವ ಮೂಲಕ ಆರೋಗ್ಯವಂತ ರಾಜ್ಯವನ್ನು ಕಟ್ಟೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 

ಸಿಎಂ ಪ್ರತಿಜ್ಞೆ

ಬಿರುಸಿನ ನಡಿಗೆಗೆ ಸ್ಫೂರ್ತಿ ತುಂಬಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದ ಮುಖ್ಯನಂತ್ರಿಗಳು ಇಂದಿನಿಂದ ನಿಯಮಿತವಾಗಿ ವಾಕಿಂಗ್ ಮಾಡುವ ಪ್ರತಿಜ್ಞೆಯನ್ನು ಕೈಗೊಂಡರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಸಂಸದ ಪಿ. ಸಿ. ಮೋಹನ, ಜಿಲ್ಲಾಧಿಕಾರಿ ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌