ವಿಜಯನಗರ ನೂತನ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹೊಸಪೇಟೆ: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದಾರೆ. ಗಾಂಧಿ ಜಯಂತಿ ದಿನ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲೆಯ 56 ನಾನಾ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ಸಿಎಂ ನೆರವೇರಿಸಿದರು. ! ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳನ್ನು ಹಾರಿಸಲಾಯಿತು. ಈ ಸಂದರ್ಭದಲ್ಲಿ ಜನರ ಹರ್ಷೋದ್ಘಾರ […]
ಮಹಾತ್ಮಾ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲಿ ಸಿಎಂ ಬಸವರಾಜ ಬೊಮ್ಮಯಿ- ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಆದ್ಯತೆ: ಮುಖ್ಯಮಂತ್ರಿ
ಬೆಂಗಳೂರು: ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆ ಹಾಗೂ ಗಾಂಧಿ ಸೇವಾ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಗಾಂಧೀಜಿ ಒಬ್ಬ ವ್ಯಕ್ತಿಯಲ್ಲ. ಅವರು ಸ್ವಾತಂತ್ರ್ಯ ಹೋರಾಟಗಾರರಷ್ಟೇ ಅಲ್ಲ; ನೈತಿಕ ಭಾರತವನ್ನು […]
ಆರ್ಥಿಕವಾಗಿ ದುರ್ಬಲರಾದ ಎಲ್ಲ ಜಾತಿಯವರನ್ನು ಮೇಲೆತ್ತುವ ಕೆಲಸವಾಗಬೇಕು ಎಂದ ರಂಭಾಪುರ ಶ್ರೀ
ವಿಜಯಪುರ: ಜಾತಿ ಮೀಸಲಾತಿ ನೀಡುವ ಬದಲು ಜನಪ್ರತಿನಿಧಿಗಳು ಆರ್ಥಿಕವಾಗಿ ದುರ್ಬಲವಾಗಿರುವ ಎಲ್ಲ ಜಾತಿಯವರನ್ನು ಮೇಲೆತ್ತುವ ಕೆಲಸ ಮಾಡಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ. ವೀರ ಸೋಮೇಶ್ವರ ಸ್ವಾಮೀಜಿ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣಿಗಳು ಜಾತಿ ಜಾತಿಗಳ ಮಧ್ಯೆ ಸಂಘರ್ಷವನ್ನು ಹುಟ್ಟು ಹಾಕುವ ವಿದ್ಯಮಾನಗಳು ಕೆಲವು ಭಾಗಗಳಲ್ಲಿ ನಡೆಯುತ್ತಿದೆ, ಇದು ಸರಿಯಲ್ಲ, ಯಾವುದೇ ಜಾತಿ, ಧರ್ಮಗಳಿರಲಿ. ಮೊದಲು ನಾವು ಭಾರತ ಮಾತೆಯ ಮಕ್ಕಳು ಎನ್ನುವ ಭಾವನೆ ಇರಬೇಕು. […]
ಗಾನಯೋಗಿ ಸಂಘದ ವಿನೂತನ ಕಾರ್ಯ- ಮಹಾತ್ಮಾ ಗಾಂಧಿ ಕಲ್ಪನೆಗೆ ಮೆರಗು ನೀಡಿದ ಯುವಕರು
ವಿಜಯಪುರ: ಮಹಾತ್ಮಾ ಗಾಂಧಿ ಅವರ ಕನಸುಗಳಿಗೆ ನೀರೆಯುವ ಮೂಲಕ ಬಸವ ನಾಡಿನ ಗಾನಯೋಗಿ ಸಂಘದ ಯುವಕರ ತಂಡ ವಿನೂತನವಾಗಿ ಸಮಾಜ ಸೇವೆ ಮಾಡುವ ಮೂಲಕ ಗಮನ ಸೆಳೆಯುತ್ತಿದೆ. ಇದು ಯಾರೂ ಊಹಿಸದ ಮತ್ತು ಮಾಡದ ಕೆಲಸ. ಈ ಯವಕರು ಮಾಡಿದ ಕೆಲಸಕ್ಕೆ ಎಂಥವರೂ ಭೇಷ ಎನ್ನದೇ ಇರಲಾರರು. ಬಸವ ನಾಡಿನ ಈ ಯುವಕರು ಈ ಹಿಂದೆ ಪುರಾತನ ಭಾವಿಗೊಂದು ರೂಪ ನೀಡಿ ಭಲೇ ಹುಡುಗರು ಎನಿಸಿಕೊಂಡಿದ್ದರು. ಈಗ ಮಾಡಿರುವ ಕಾರ್ಯ ಆ ಭಾಗದಲ್ಲಿ ತಿರುಗಾಡುವವರೇ ಅಸಹ್ಯ ಪಟ್ಟುಕೊಳ್ಳುವಂತಿತ್ತು. ಆದರೆ, […]