ವಿಜಯನಗರ ನೂತನ ಜಿಲ್ಲೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸಪೇಟೆ: ರಾಜ್ಯದ 31 ನೇ ಜಿಲ್ಲೆಯಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ್ದಾರೆ.


ಗಾಂಧಿ ಜಯಂತಿ ದಿನ ಅಸ್ತಿತ್ವಕ್ಕೆ ಬಂದ ನೂತನ ವಿಜಯನಗರ ಜಿಲ್ಲೆ ಕುರಿತ ಸರಕಾರದ ಆದೇಶವನ್ನು ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲೆಯ 56 ನಾನಾ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕು ಸ್ಥಾಪನೆಯನ್ನು ಸಿಎಂ ನೆರವೇರಿಸಿದರು.

!

ವರ್ಣರಂಜಿತವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಜಿಲ್ಲೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಪಟಾಕಿ, ಸಿಡಿ ಮದ್ದುಗಳನ್ನು ಹಾರಿಸಲಾಯಿತು.‌ ಈ ಸಂದರ್ಭದಲ್ಲಿ ಜನರ ಹರ್ಷೋದ್ಘಾರ ಮುಗಿಲು ಮುಟ್ಟಿತು

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಸಚಿವರಾದ ಆನಂದಸಿಂಗ್, ಗೋವಿಂದ ಕಾರಜೋಳ, ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಸಿ. ಸಿ. ಪಾಟೀಲ, ಬೈರತಿ ಬಸವರಾಜ ಭಾಗಿ, ಬಿ. ಶ್ರೀರಾಮುಲು, ಸುನಿಲಕುಮಾರ್ ಮತ್ತಿತರರು ಗಣ್ಯರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌