ಅರಣ್ಯ ಪರಿಸರ ವೀಕ್ಷಣೆ ಗೋಪುರಕ್ಕೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು
ವಿಜಯಪುರ: ಅರಣ್ಯ ಪರಿಸರ ವೀಕ್ಷಣಾ ಗೋಪುರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದ ಘಟನೆ ವಿಜಯಪುರ ನಗರದ ಹೊರ ವಲಯದ ಭೂತ್ನಾಳ ಕೆರೆಯ ಹಿಂಭಾಗದಲ್ಲಿ ನಡೆದಿದೆ. ಕೋಟಿ ವೃಕ್ಷ ಅಭಿಯಾನದಡಿ ಮಾಜಿ ಸಚಿವ ಎಂ. ಬಿ. ಪಾಟೀಲ ಸಚಿವರಾಗಿದ್ದಾಗ ಕರಾಡೆದೊಡ್ಡಿ ಬಳಿ 500 ಎಕರೆ ಪ್ರದೇಶದಲ್ಲಿ ಅರಣ್ಯ ಬೆಳೆಸಲು ನಾಂದಿ ಹಾಡಿದ್ದರು. ಸರಕಾರದ ನಾನಾ ಇಲಾಖೆಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಮತ್ತು ರೈತರು ಇದಕ್ಕೆ ಕೈ ಜೋಡಿಸಿದ್ದರು. ವರ್ಷದಿಂದ ವರ್ಷಕ್ಕೆ ಈ ಕೋಟಿ ವೃಕ್ಷ ಅಭಿಯಾನ ಯಶಸ್ಸು ಪಡೆಯುತ್ತಿದೆ. […]
ಸಿಂದಗಿ, ಹಾನಗಲ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ- ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ
ಬಳ್ಳಾರಿ: ಮುಂಬರುವ ಸಿಂದಗಿ ಮತ್ತು ಹಾನಗಲ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಸಿದಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಕೋರ್ ಕಮಿಟಿ ಸಭೆಯಲ್ಲಿ ಈ ಕ್ಷೇತ್ರದಿಂದ ತರಿಸಿಕೊಂಡ ವರದಿಯ ಕುರಿತು ಚರ್ಚಿಸಿ, ಪಕ್ಷದ ಸಂಸದೀಯ ಮಂಡಳಿಗೆ ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗುವುದು. ಶೀಘ್ರವೇ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆ. ಪಕ್ಷವು ಬೂತ್ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರ ವರೆಗೆ ಎಲ್ಲರೂ ಒಂದಾಗಿ ಕಾರ್ಯ […]
ಯುಕೆಪಿ-3 ನೇ ಹಂತದ ಯೋಜನೆ ಸಂಪೂರ್ಣ ಜಾರಿಗಾಗಿ ಯಾವುದೇ ಹೋರಾಟಕ್ಕೆ ಸಿದ್ಧ- ಎಂಎಲ್‌ಸಿ ಸುನೀಲಗೌಡ ಪಾಟೀಲ
ಬಾಗಲಕೋಟೆ: ಯುಕೆಪಿ-3ನೇ ಹಂತದ ಯೋಜನೆ ಸಂಪೂರ್ಣ ಜಾರಿಗಾಗಿ ಯಾವುದೇ ಹೋರಾಟಕ್ಕೂ ನಾನು ಸಿದ್ಧ ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನೀಲಗೌಡ ಬಿ. ಪಾಟೀಲ ತಿಳಿಸಿದ್ದಾರೆ. ಯುಕೆಪಿ-3ನೇ ಹಂತದ ಎಲ್ಲ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಅನಗವಾಡಿ ಸೇತುವೆಯಿಂದ ಟಕ್ಕಳಕಿ ಕೃಷ್ಣಾ ನದಿಯವರೆಗೆ ಆಯೋಜಿಸಲಾಗಿದ್ದ ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಪಾದಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. 1964 ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಂದ ಆರಂಭವಾದ ಯುಕೆಪಿ ಯೋಜನೆಗಳು ನಾನಾ […]