ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನಗು ತರಿಸುತ್ತಿದೆ ಎಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ

ವಿಜಯಪುರ: ಆರ್ ಎಸ್ ಎಸ್ ಕುರಿತು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗಹಗಹಿಸಿ ನಗುವ ಮೂಲಕ ಉತ್ತರ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಮ್ಮ ಅಭ್ಯರ್ಥಿ ಹಿಂದಿನ ಚುನಾವಣೆಗಿಂತಲೂ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಆರ್ ಎಸ್ ಎಸ್ ಐಎಎಸ್ ಐಪಿಎಸ್ ಟ್ರೇನಿಂಗ್ ನೀಡಿದೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಗಹಗಹಿಸಿ ನಕ್ಕು ಪ್ರತಿಕ್ರಿಯಿಸಿದ ಅವರು, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ.  ನನಗೂ ಇದು ಮುಜುಗರ ತರುವಂತೆ ಆಗುತ್ತಿದೆ.  ಅಧಿಕಾರಿಗಳು, ಯಾವುದೇ ಸಂಘಟನೆಗಳು, ಪಕ್ಷಗಳಿಗೆ ಸೇರಿರುವುದಿಲ್ಲ.  ಅವರು ಯಾಕೆ ಆ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ.  ಯಾವ ಅರ್ಥದಲ್ಲಿ ಹೇಳಿದ್ದಾರೆ ನನಗೂ ಅರ್ಥವಾಗುತ್ತಿಲ್ಲ.  ಎಚ್. ಡಿ. ಕುಮಾರಸ್ವಾಮಿ ಅವರ ಹೇಳಿಕೆ ನನಗೆ ಸರಿ ಎನಿಸಿಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದರು.

 

Leave a Reply

ಹೊಸ ಪೋಸ್ಟ್‌