ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಕಾವೇರಿ ತಾಯಿಗೆ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ಚನ್ನಮ್ಮ ಜೊತೆ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಪೂಜೆ ಸಲ್ಲಿಸಿದರು. ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿಗಳು ಪೂಜೆ ಸಲ್ಲಿಸಿದರು.
ನಂತರ ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್ ಅಶೋಕ ಬೈರತಿ ಬಸವರಾಜ, ಸುನಿಲಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಇತರರು ಉಪಸ್ಥಿತರಿದ್ದರು.