ಮತದಾನ ಕುರಿತು ಸಿಂದಗಿ ಮತಕ್ಷೇತ್ರದಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಜಾಗೃತಿ ಜಾಥಾ
ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರಕ್ಕೆ ಅ. 30 ರಂದು ಬೈ ಎಲೆಕ್ಷನ್ ನಡೆಯುತ್ತಿದ್ದು, ಇದಕ್ಕಾಗಿ ವಿಜಯಪುರ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಪಂಚಾಯಿತಿ ವತಿಯಿಂದ ಸ್ವೀಪ್ ಯೋಜನೆ ಅಂಗವಾಗಿ ಮತದಾರರ ಜಾಗೃತಿ ಜಾಥಾ ನಡೆಸಲಾಯಿತು. ಸಿಂದಗಿ ಮತಕ್ಷೇತ್ರದ ನಾನಾ ಗ್ರಮಾಗಳಲ್ಲಿ ನಡೆದ ಈ ಜಾಥಾದಲ್ಲಿ ಮತದಾನದ ಮಹತ್ವ ಮತ್ತು ಮತದಾನದ ಹಕ್ಕಿನ ಕುರಿತು ಕೈಯಲ್ಲಿ ಭಿತ್ತಿಪತ್ರ ಹಿಡಿದು ಯುವಕರು ಪಾಲ್ಗೋಂಡು ಜಾಗೃತಿ ಮೂಡಿಸಿದರು.
ಆರ್ ಎಸ್ ಎಸ್ ಬಗ್ಗೆ ಮಾತನಾಡುವುದನ್ನು ಬಿಡಿ- ಬೇಕಿದ್ದರೆ ನಮ್ಮ ಜೊತೆ ಕುಸ್ತಿಗೆ ಬನ್ನಿ- ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಯತ್ನಾಳ ವಾಗ್ದಾಳಿ
ವಿಜಯಪುರ: ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಕುಮಾರಸ್ವಾಮಿ ಅವರದು ತಾಲಿಬಾನ್ ಪಾರ್ಟಿ. ಆರ್ ಎಸ್ ಎಸ್ ಬಗ್ಗೆ ಏನು ಬೇಕಾದರೂ ಮಾತನಾಡುತ್ತಾರೆ. ಆರ್ ಎಸ್ ಎಸ್ ನವರೇನು ಎಕೆ-47 ಕೊಟ್ಟು ಭಯೋತ್ಪಾದಕರನ್ನು ರೆಡಿ ಮಾಡಿದ್ದಾರಾ? […]
ಬೈ ಎಲೆಕ್ಷನ್ ನಲ್ಲಿ ಮತದಾರರು ಬಿಜೆಪಿ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ- ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ
ವಿಜಯಪುರ: ಬಿಜೆಪಿಯ ದುರಾಡಳಿತಕ್ಕೆ ಮತದಾರರು ಬೈ ಎಲೆಕ್ಷನ್ ನಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಯಾವ ವರ್ಗಕ್ಕೂ ಅನುಕಾಲವಾಗಿಲ್ಲ. ಇದನ್ನು ಗಮನದಲ್ಲಿಟ್ಟುಕೊಂಡಿರುವ ಬೈ ಎಲೆಕ್ಷನ್ ನಡೆಯುತ್ತಿರುವ ಎರಡು ಕ್ಷೇತ್ರಗಳ ಜನ ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಸಿಂದಗಿ ಮತ್ತು ಹಾನಗಲ ಮತದಾರರ ಮೇಲೆ ವಿಶ್ವಾಸ […]
ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ- ಸಚಿವ ಕೆ. ಎಸ್. ಈಶ್ವರಪ್ಪ
ವಿಜಯಪುರ: ಮುಂಬರುವ ವಿಧಾನ ಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಎರಡು ಹೋಳಾದರೆ ಅಚ್ಚರಿಯಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ ಬೈ ಎಲೆಕ್ಷನ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಚುನಾವಣೆ ಬಳಿಕ ಕಾಂಗ್ರೆಸ್ […]