ಆಹಾರ ಇಲಾಖೆ ಸಿಬ್ಬಂದಿ ಧಾಳಿ- ನಕಲಿ ಬಯೋ ಡೀಸಲ್ ಮಾರಾಟ ಅಡ್ಡೆ ಪತ್ತೆ
ವಿಜಯಪುರ: ವಿಜಯಪುರ ಆಹಾರ ಇಲಾಖೆ ಅಧಿಕಾರಿಗಳು ಭರ್ಜರಿ ಧಾಳಿ ನಡೆಸಿದ್ದು, ನಕಲಿ ಬಯೋ ಡೀಸೆಲ್ ಮಾರಾಟ ಮಾಡುತ್ತಿದ್ದ ಅಡ್ಡೆಯನ್ನು ಪತ್ತೆ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಝಳಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ಈ ಧಾಳಿ ನಡೆದಿದೆ. ಈ ಪ್ರದೇಶದಲ್ಲಿ ಶೆಡ್ ನಲ್ಲಿ ನಕಲಿ ಬಯೋ ಡಿಸೈಲ್ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಆಹಾರ ಇಲಾಖೆ ಅಧಿಕಾರಿಗಳ ತಂಡ ಈ ಧಾಳಿ ನಡೆಸಿದೆ. ಅಧಿಕಾರಿಗಳ ತಂಡ ಧಾಳಿ ನಡೆಸುತ್ತಿದ್ದಂತೆ ನಕಲಿ ಬಯೋ […]
ಬಿರುಗಾಳಿ ಸಹಿತ ಮಳೆಗೆ ಇಳೆಗುರುಳಿದ ಬೆಳೆ- ಸಿಹಿಯ ನಿರೀಕ್ಷೆಯಲ್ಲಿದ್ದ ರೈತನಿಗೆ ಕಹಿಯಾದ ಕಬ್ಬು
ವಿಜಯಪುರ: ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಅನ್ನದಾತರ ಕೈಗೆ ಬರಬೇಕಿದ್ದ ತುತ್ತು ಬಾಯಿಗೆ ಬರದಂತಾದ ಘಟನೆ ಗುಮ್ಮಟ ನಗರಿ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದಿದೆ. ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ನೀರಾವರಿ ಸೌಲಭ್ಯ ಲಭ್ಯವಾಗಿದೆ. ರೈತರು ವಾಣಿಜ್ಯ ಬೆಳೆಗಳತ್ತ ಮುಖ ಮಾಡಿದ್ದಾರೆ. ಉತ್ತಮ ಇಳುವರಿಯ ನಿರೀಕ್ಷೆಯಲ್ಲಿದ್ದಾರೆ. ಇಂಥದ್ದೆ ಉತ್ತಮ ಬೆಳೆಯ ನಿರೀಕ್ಷೆಯಲ್ಲಿ ತಿಕೋಟಾ ತಾಲೂಕಿನ ಕೆಲವು ಗ್ರಾಮಗಳಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರ ಅಪಾರ ಪ್ರಮಾಣದ ಬೆಳೆ […]
ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ
ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದಲ್ಲಿ ನಾನಾ ಕೈಗಾರಿಕೋದ್ಯಮಿಗಳು ಸೇರಿದಂತೆ ನಾನಾ ಕೈಗಾರಿಕೆ ಸಂಸ್ಥೆಗಳ ಮಾಲಿಕರು, ಹಿರಿಯ ಸಿಬ್ಬಂದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. […]