ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಉದ್ಯಮಿಯಾಗು, ಉದ್ಯೋಗ ನೀಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದಲ್ಲಿ ನಾನಾ ಕೈಗಾರಿಕೋದ್ಯಮಿಗಳು ಸೇರಿದಂತೆ ನಾನಾ ಕೈಗಾರಿಕೆ ಸಂಸ್ಥೆಗಳ ಮಾಲಿಕರು, ಹಿರಿಯ ಸಿಬ್ಬಂದಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ, ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.