ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್ ಕೊಡುಗೆ ಘೋಷಿಸಿದ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‌ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮೆ ಯೋಜನೆ ಮತ್ತು ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿ ಮಾಡುವಂತೆ ಆದೇಶ ಹೊರಡಿಸಿರುವುದಾಗಿ ತಿಳಿಸಿದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯ […]

ಸಿಂದಗಿ, ಹಾನಗಲ್ ಎರಡೂ ಬೈ ಎಲೆಕ್ಷನ್ ಗೆಲ್ಲುವ ವಿಶ್ವಾಸವಿದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ: ವಿಜಯಪುರ ಜಿಲ್ಲೆಯ ಸಿಂಧಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪ್ರಮುಖರೊಂದಿಗೆ ಚುನಾವಣಾ ಪ್ರಚಾರ ಮತ್ತು ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗಿದೆ. ಈ ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಾವಣಗೆರೆ ಅಭಿವೃದ್ಧಿಯ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಹಾವೇರಿ ಜಿಲ್ಲೆಯ ಮುಖಂಡರಾದ ಬಳ್ಳಾರಿ ಅವರೊಂದಿಗೆ ನಮ್ಮದು 40 ವರ್ಷಗಳ ಸಂಬಂಧ. ಅವರೊಂದಿಗೆ ಸಹ ಚರ್ಚೆ ಮಾಡಲಾಗಿದೆ ಎಂದು ತಿಳಿಸಿದರು. ಬೆಂಗಳೂರು ಜಿಲ್ಲಾ […]

ಹೊಸ ಪಕ್ಷ ರಚನೆಗೆ ಮುಂದಾಗಿದ್ದೆ ಐಟಿ ರೇಡ್ ಗೆ ಕಾರಣ- ಯತ್ನಾಳ ಆರೋಪ

ವಿಜಯುರ: ಕರ್ನಾಟಕದಲ್ಲಿ ಲೂಟಿ ಹೊಡೆದ ಹಣದಿಂದ ಕುಮಾರಸ್ವಾಮಿ ಜೊತೆಗೂಡಿ ಹೊಸ ಪಕ್ಷ ರಚನೆಗೆ ಮುಂದಾಗಿದ್ದೆ ಐಟಿ ಧಾಳಿಗೆ ಕಾರಣ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಭ್ರಷ್ಡಾಚಾರದ ಹಣದಿಂದ ರಾಜ್ಯದಲ್ಲಿ ಬಿಜೆಪಿಗೆ ಬುದ್ದಿ ಕಲಿಸಲು ಹೊಸ ಪಕ್ಷ ಕಟ್ಟಲು ಮುಂದಾಗಿದ್ದರು. ಈಗ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸರಿಯಾದ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ಮೂಲಕ ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು […]

ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಪ್ಪಂದ- ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ಧಿಯ ಗುರಿ- ಪ್ರತಿ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಲಾಭ

ಬೆಂಗಳೂರು: ಉದ್ಯಮ ರಂಗವು ನಿರೀಕ್ಷಿಸುವಂಥ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ನಾಸ್ಕಾಂ(ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಅಂಡ್ ಸರ್ವೀಸ್ ಕಂಪನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ‌ ನಡೆದ ಸಮಾರಂಭದಲ್ಲಿ ಈ ಮಹತ್ವದ ಒಡಂಬಡಿಕೆಗೆ ಅಂಕಿತ ಹಾಕಲಾಯಿತು. ಬಳಿಕ ಮಾತನಾಡಿದ ಸಚಿವರು, ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ […]

ಪ್ಯಾಂಟಿನ ಬೆಲ್ಟಿನಲ್ಲಿಟ್ಟು 804 ಗ್ರಾಂ ಚಿನ್ನದ ಗಟ್ಟಿ ಸಾಗಿಸಲು ಯತ್ನ- ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಬೆಲ್ಟಿನಲ್ಲಿಟ್ಟುಕೊಂಡು 804 ಗ್ರಾಂ ಚಿನ್ನದ ಗಟ್ಟಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದು, ಗಟ್ಟಿಚಿನ್ನ ವಶಪಡಿಸಿಕೊಂಡಿದ್ದಾರೆ. ಗಟ್ಟಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡಲು ದುಷ್ಕರ್ಮಿಗಳು ನಾನಾ ತಂತ್ರಗಳನ್ನು ರೂಪಿಸುತ್ತಿರುತ್ತಾರೆ. ಅಂತಾರಾಷ್ಟ್ರೀಯ ವಿಮಾನಗಳ ಮೂಲ ಆಗಮಿಸುವ ಕೆಲವು ಜನ ಕಳ್ಳರು ದೇಹದ ಯಾವುದಾದರೊಂದು ಭಾಗದಲ್ಲಿ ಅಡಗಿಸಿ ಇಟ್ಟುಕೊಂಡು ವಿದೇಶಗಳಿಂದ ವಿಮಾನದ ಮೂಲಕ ಚಿನ್ನವನ್ನು ಕದ್ದು ತರುವ ಉದಾಹರಣೆಗಳು ಸಾಕಷ್ಠಿವೆ. ಆದರೆ, ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಓರ್ ಬೆಲ್ಟಿನಲ್ಲಿ ಚಿನ್ನದ ಗಟ್ಟಗಳನ್ನು ಅಡಗಿಸಿಟ್ಟುಕೊಂಡು ಅಕ್ರಮವಾಗಿ ಸಾಗಿಸುವಾಗ […]