ಸಂಸದ ರಮೇಶ ಜಿಗಜಿಣಗಿ, ಶಾಸಕ ನಡಹಳ್ಳಿ ಅವರಿಂದ ಬಿಜೆಪಿ ಅಭ್ಯರ್ಥಿ ಪರ ಭರ್ಜರಿ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರಕ್ಕೆ ನಡೆಯುತ್ತಿರುವ ಬೈ ಎಲೆಕ್ಷನ್ ಪ್ರಚಾರ ಚುರುಕು ಪಡೆದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ರಮೇಶ ಭೂಸನೂರ ಪರ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಮತ್ತು ಮುದ್ದೇಬಿಹಾಳ ಬಿಜೆಪಿ ಶಾಸಕ ಮತ್ತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಸಂಸದ ರಮೇಶ ಜಿಗಜಿಣಗಿ ಬಿಜೆಪಿ ಮುಖಂಡರ ಜೊತೆ ಸೇರಿಕೊಂಡು ಬನಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ ರಮೇಶ ಭೂಸನೂರ ಪರ ಮತ ಯಾಚಿಸಿದರು.  ಅದೇ ರೀತಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಕೂಡ ಪ್ರಚಾರ ಕೈಗೊಂಡರು.

ಈ ಮಧ್ಯೆ ಸಿಂದಗಿ ಪಟ್ಟಣದಲ್ಲಿ ನಡಹಳ್ಳಿ ಅವರು ದಲಿತ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತ ಯಾಚಿಸಿದರು.  ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮತ್ತು ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌