ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 25 ಸಾವಿರ ಅಂತರದಿಂದ ಗೆಲುವು ಸಾಧಿಸಲಿದ್ದಾರೆ- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಬೂಸನೂರು ಕನಿಷ್ಟ ಸುಮಾರು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮುಜರಾಯಿ. ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಸಿಂದಗಿ ಮತಕ್ಷೇತ್ರದ ಉಪ ಚುನಾವಣೆಯನ್ನು ವ್ಯವಸ್ಥಿತವಾಗಿ ಎದುರಿಸುತ್ತಿದ್ದೇವೆ. ದೇವಣಗಾಂವ ಮತ್ತು ಕನ್ನೋಳ್ಳಿ ಎರಡೂ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಚಾರದ ಜವಾಬ್ದಾರಿಯನ್ನು ನನಗೆ ವಹಿಸಲಾಗಿದೆ. ಎಲ್ಲ […]
ಇನ್ನೋಂದು ವರ್ಷದಲ್ಲಿ ಕಾಂಗ್ರೆಸ್ ದಿವಾಳಿಯಾಗಲಿದೆ ಎಂದು ಭವಿಷ್ಯ ನುಡಿದ ಸಚಿವ ಗೋವಿಂದ ಕಾರಜೋಳ
ವಿಜಯಪುರ. ಇನ್ನೊಂದು ವರ್ಷದಲ್ಲಿ ಕಾಂಗ್ರೆಸ್ ದಿವಾಳಿಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇಶದಲ್ಲಿ ಕಾಂಗ್ರೆಸ್ 75 ವರ್ಷ ಅಧಿಕಾರವಧಿಯಲ್ಲಿ ದೀನ, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದೆ. ಅವರು ಕಾಂಗ್ರೆಸ್ ಮಾಡಿದ ಅನ್ಯಾಯದ ವಿರುದ್ಧ ಈ ಬಾರಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಬಿಜೆಪಿಗೆ ಮತದಾರರು ಎರಡು ಬಾರಿ ಸ್ಪಷ್ಟ ಬಹುಮತ ನೀಡಿದ್ದಾರೆ. ಇದು ಜನ ಬಿಜೆಪಿ […]
ಬೈ ಎಲೆಕ್ಷನ್ ನಿಂದ ಬಿಜೆಪಿ ಅವನತಿ ಶುರವಾಗಿದೆ- ಆಲಮೇಲದಲ್ಲಿ ಡಿ ಕೆ ಶಿವಕುಮಾರ ಹೇಳಿಕೆ
ವಿಜಯಪುರ: ಬೈ ಎಲೆಕ್ಷನ್ ನಿಂದ ಬಿಜೆಪಿ ಅವನತಿ ಶುರುವಾಗಿದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ. ಕೆ. ಶಿವಕುಮಾರ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಪ್ರಚಾರದಲ್ಲಿರುವ ಅವರು ಆಲಮೇಲ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಂದರ್ಭದಲ್ಲಿ ಮಾತನಾಡಿದರು. ಆಲಮೇಲ ಪಟ್ಟಣಕ್ಕೆ ಆಗಮಿಸಿದ ಡಿ. ಕೆ. ಶಿವಕುಮಾರ ಮತ್ತು ಮಾಜಿ ಸಚಿವ ಶಿವಾನಂದ ಪಾಟೀಲ, ಈಶ್ವರ ಖಂಡ್ರೆ, ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ, ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಕಾರ್ಯಕರ್ತರು ಹೂಮಳೆ […]
ಬೈ ಎಲೆಕ್ಷನ್ ಬಳಿಕ ಸಭೆ ನಡೆಸಿ ಆರ್ಥಿಕತೆ ಸುಧಾರಿಸಿದರೆ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತು ನಿರ್ಧಾರ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಆರ್ಥಿಕತೆಯ ಮೇಲೆ ತೈಲ ಬೆಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಬೈ ಎಲೆಕ್ಷನ್ ಬಳಿಕ ರಾಜ್ಯದ ಆರ್ಥಿಕ ಸ್ಥಿತಿಗತಿ ಕುರಿತು ಸಭೆ ನಡೆಸಿ ಚರ್ಚಿಸಿ ತೈಲ ಬೆಲೆ ಇಳಿಕೆ ಬಗ್ಗೆ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೈ ಎಲೆಕ್ಷನ್ ಬಳಿಕ ಆರ್ಥಿಕ ಸ್ಥಿತಿಗತಿ ಕುರಿತು ಸಭೆ ನಡೆಸಿ ಪರಿಶೀಲನೆ ಮಾಡುತ್ತೇನೆ. ಆ ಸಂದರ್ಭದಲ್ಲಿ ಆರ್ಥಿಕ ಸ್ಥಿತಿ ಸುಧಾರಿಸಿದ್ದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಬಗ್ಗೆ ಪರಿಶೀಲನೆ […]
ಭೂಕಂಪ ಅನುಭವಿಸುತ್ತಿರುವ ಗ್ರಾಮಗಳಲ್ಲಿ ಬಯಲು ಪ್ರದೇಶಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ
ವಿಜಯಪುರ: ವಿಜಯಪುರ ಜಿಲ್ಲೆಯ ನಾನಾ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ಪದೇ ಪದೇ ಭೂಕಂಪನದ ಅನುಭವ ಉಂಟಾಗುತ್ತಿದೆ. ಈ ಗ್ರಾಮಗಳಲ್ಲಿ ಸುರಕ್ಷತೆ ಇರುವ ಬಯಲು ಪ್ರದೇಶಗಳನ್ನು ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಲೋಕೋಪಯೋಗಿ, ಪಂಚಾಯಿತಿ ರಾಜ್ ಎಂಜಿನಿಯರಿಂಗ್ ಇಲಾಖೆ ಮತ್ತು ತಹಶೀಲ್ದಾರರ ಅವರಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ ನಡೆಸಿದ ಅವರು, ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ಭೂಕಂಪದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು. ಜಿಲ್ಲೆಯಲ್ಲಿ […]