ವಿಜಯಪುರ: ಮಾಜಿ ಮುಖ್ಯಮಂತ್ತಿ ಗಳಾದ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ಧರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಮೊರಟಗಿಯಲ್ಲಿ ಅವರು ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಪ್ರಚಾರಕ್ಕೆ ಆಗಿಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಕುರಿತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಇಬ್ಬರೂ ಮಾಜಿ ಮುಖ್ಯಮಂತ್ರಿಗಳು ಅವರ ಖುಷಿ ಬಂದಂಗೇ ಮಾಡಲಿ. ಅನಗತ್ಯವಾಗಿ ಆರ್ ಎಸ್ ಎಸ್ ಹೆಸರು ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಆರ್ ಎಸ್ ಎಸ್ ಹೆಸರು ಬಳಸುವ ಅಗತ್ಯ ಇಲ್ಲ. ಏನೋ ಸಾಧನೆ ಮಾಡಿರುವ ಹಾಗೇ ಎಚ್. ಡಿ. ಕುಮಾರಸ್ವಾಮಿ ಮತ್ತು ಎಸ್. ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ. ಇದರಿಂದ ಅವರಿಗೇನೂ ಲಾಭ ಇಲ್ಲ ಎಂದು ಅವರು ಹೇಳಿದರು.
ಎಚ್. ಡಿ. ಕುಮಾರಸ್ವಾಮಿ ಯಾವಾಗ ಏನು ಮಾತನಾಡುತ್ತಾರೆ ಎಂಬುದರ ಕುರಿತು ಅವರಿಗೆ ಗೊತ್ತಿರಲ್ಲ. ಆದರೆ, ಮತದಾರರಿಗೆ ಯಾವುದು ಸತ್ಯ ಎಂಬುದು ಗೊತ್ತಿದೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ಉತ್ತರ ನೀಡುತ್ತಾರೆ ಎಂದು ಅವರು ಹೇಳಿದರು.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿಕೆ ಬಗ್ಗೆ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಆ ತರಹ ಯಾರ ಬಗ್ಗೆನೂ ಮಾತನಾಡಬಾರದು. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅವರ ಜೊತೆ ಮಾತನಾಡಿ ತಿಳಿದುಕೊಳ್ಳುತ್ತೇನೆ. ಆ ಥರ ಮಾತನಾಡುವ ಅಗತ್ಯ ಇಲ್ಲ ಎಂದು ಅವರು ಕಿವಿಮಾತು ಹೇಳಿದರು.
ರಾಹುಲ್ ಗಾಂಧಿ ಬಗ್ಗೆ ಗೌರವ ಇದೆ. ಎಲ್ಲರಿಗೂ ಅವರವರ ಗೌರವ ಇರುತ್ತದೆ. ಅವರಿಗೆ ಅಗೌರವ ತರುವ ಹಾಗೇ ಯಾರು ಮಾತನಾಡಬಾರದು ಎಂದು ಬಿ. ಎಸ್. ಯಡಿಯೂರಪ್ಪ ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ಅವರ ಪರ ಬಿಎಸ್ವೈ ಬ್ಯಾಟಿಂಗ್ ಮಾಡಿದರು.
ಈ ಸಙದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಸಂಗಣ್ಣ ಕೆ. ಬೆಳ್ಳುಬ್ಬಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.