ಅಡುಗೆ ಮಾಡುವ ಹೆಣ್ಣು ಮಗಳು ಮಂತ್ರಿಯಾಗಲು ಬಿಜೆಪಿಯಲ್ಲಿ ಮಾತ್ರ ಅವಕಾಶ- ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.

 

ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಚುನಾವಣೆ ಅಂಗವಾಗಿ ಆಲಮೇಲ ತಾಲೂಕಿನ ಭೀಮಾ ತೀರದ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಮತ ಯಾಚಸಿ ಅವರು ಮಾತನಾಡಿದರು.

ಬಿಜೆಪಿಯಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾಂತಂತ್ರ್ಯ ಇದೆ.  ದೇಶದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರಿದ್ದೇವೆ.  ಮೊದಲು ತವರು ಮಹಿಳೆಯರು ತವರು ಮನೆಯಲ್ಲಿ ಅಪ್ಪ, ಅಣ್ಣ ಹೇಳಿದಂತೆ ಮದುವೆಯಾದ ಮೇಲೆ ಗಂಡ ಹೇಳಿದಂತೆ ಮತ ಚಲಾಯಿಸುತ್ತ ಬಂದಿದ್ದೇವೆ. ಆದರೆ, ನಮ್ಮ ಬೇಡಿಕೆ ಏನು ಎಂದು ಯಾರಿಗೂ ಕೇಳೋಲ್ಲ. ಆದರೆ, ಕೇಂದ್ರದಲ್ಲಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಮಹಿಳೆಯರಿಗೆ ಅಡುಗೆ ಮನೆಯಲ್ಲಿ ಕಟ್ಟಿಗೆಯಿಂದ ಅಡುಗೆ ಮಾಡುವ ತೊಂದರೆ ತಪ್ಪಿಸಲು ಉಜ್ವಲ ಯೋಜನೆ ಜಾರಿಗೆ ತಂದು ದೇಶಾದ್ಯಂತೆ ಸುಮಾರು 8 ಕೋಟಿ ಮನೆಗಳಿಗೆ ಅಡಿಗೆ ಅನಿಲ್ ಗ್ಯಾಸ್ ನೀಡುವ ಮೂಲಕ ಮಹಿಳೆಯರ ಕಣ್ಣೀರು ವರೆಸುವ ಕೆಲಸ ಮಾಡಿದ್ದಾರೆ. ಹೆಣ್ಣು ಮಕ್ಕಳ ರಕ್ಷಣೆಗೆ ಬೇಟಿ ಪಡಾವೊ ಬೇಟಿ ಪಡಾವೊ ಯೋಜನೆ ಜಾರಿಗೆ ತಂದಿದ್ದರೆ ಎಂದು ಹೇಳಿದರು.


ರಾಜ್ಯದ ಯಡಿಯೂರಪ್ಪ ನೇತೃತ್ಬದ ಸರಕಾರ ರಾಜ್ಯದಲ್ಲಿ ಹುಟ್ಟಿದ ಪ್ರತಿಯೊಂದು ಹೆಣ್ಣು ಮಗುವನ್ನು ಭಾಗ್ಯಲಕ್ಷ್ಮಿ ಎಂದು ಕರೆದು ಹುಟ್ಟಿದ ಹೆಣ್ಣು ಮಗುವಿಗೆ ಭಾಗ್ಯಲಕ್ಷ್ಮೀ ಬಾಂಡ್ ನೀಡುವ ಯೋಜನೆ ಜಾರಿಗೆ ತಂದಿದ್ದಾರೆ.
ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರ ಮಕ್ಕಳು ಉನ್ನತ ಶಿಕ್ಷಣ ಕಲಿಯಲು ಅನುಕೂಲವಾಗಲೆಂದು ವಿಧ್ಯಾನಿಧಿ ಯೋಜನೆ ಜಾರಿಗೆ ತಂದಿದ್ದಾರೆ ಎಂದು ಅವರು ತಿಳಿಸಿದರು.

/

ರೈತರಿಗೂ ಕೇಂದ್ರದ ನರೇಂದ್ರ ಮೋದಿ ಸರಕಾರ ಕಿಸಾನ್ ಸಮ್ಮಾನ ಯೋಜನೆ ಮೂಲಕ ಪ್ರತಿಯೊಬ್ಬರ ರೈತರ ಖಾತೆಗಳಿಗೆ ನೇರವಾಗಿ ಹಣ ಬಿಡುತ್ತಾರೆ.‌  ನಮ್ಮ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅದಕ್ಕೆ ರೂ. 4000 ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿಸುವ ಮೂಲಕ ರಾಜ್ಯ ಸರಕಾರದಿಂದಲೂ ರೈತರಿಗೆ ನೆರವಾಗಿದ್ದಾರೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಸಿಂದಗಿಯಲ್ಲಿ ರಮೇಶ್ ಬೂಸನೂರು ಅವರನ್ನು ಈ ಚುನಾವಣೆಯಲ್ಲಿ ಆಯ್ಕೆ ಮಾಡುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರದ ಶಕ್ತಿ ಬಲಪಡಿಸುವಂತೆ ಸಚಿವರು ಅವರು ಮನವಿ ಮಾಡಿದರು.

ಇದಕ್ಕೂ ಮೊದಲು ಸಚಿವರು ಪಕ್ಷದ ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಪೇಜ್ ಪ್ರಮುಖರ ಜೊತೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ವಸತಿ ಸಚಿವರಾದ ವಿ. ಸೋಮಣ್ಣ, ಶಾಸಕರಾದ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌