ವಿಜಯಪುರ: ಬಿಜೆಪಿ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳಾಗಿವೆ. ಈ ಬೈ ಎಲೆಕ್ಷನ್ ನಲ್ಲಿ ಸೋಲಿನ ಹತಾಶೆಯಿಂದಾಗಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ವಿಧಆನ ಪರಿಷತ ಕಾಂಗ್ರೆಸ್ ಸದಸ್ಯ ಪ್ರಕಾಶ ರಾಠೋಡ ಆರೋಪಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರ ಬಿ. ವೈ. ವಿಜಯೇಂದ್ರ ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ಅವರೇ ಆರೋಪಿಸುತ್ತಿದ್ದಾರೆ. ಈಗ ಆ ಹಣದ ಪ್ರಭಾವದಿಂದ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ, ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಮಾಜಿ ಸಚಿವ ಎಚ್. ಡಿ. ರೇವಣ್ಣ ಕಾಂಗ್ರೆಸ್ ಪಕ್ಷವನ್ನು ನಕಲಿ ಕಾಂಗ್ರೆಸ್ ಎಂದ ಹೇಳುತ್ತಿದ್ದಾರೆ. ದೇವೇಗೌಡರೇ ತಾವು ಪ್ರಧಾನಿಯಾಗಿದ್ದು ಕಾಂಗ್ರೆಸ್ ಪಕ್ಷದ ಬೆಂಬಲದಿಂದ. ಜೆಡಿಎಸ್ ನಿಂದ ಕಡಿಮೆ ಸಂಖ್ಯೆಯಲ್ಲಿ ಶಾಸಕರು ಆಯ್ಕೆಯಾಗಿದ್ದರೂ ನಿಮ್ಮ ಪುತ್ರ ಎಚ್. ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇವು. ದೇವೇಗೌಡರ ವರ್ತನೆ ಗೋಮುಖ ವ್ಯಾಘ್ರದಂತಿದೆ. ತಮಗೆ ಅನುಕೂಲ ಬಂದಂತೆ ತಿರುಗುತ್ತಾರೆ. ಒಂದು ಕಡೆ ಸೋನಿಯಾ ಗಾಂಧಿ ಅವರ ಬಗ್ಗೆ ಅಭಿಮಾನ ತೋರಿಸುತ್ತಾರೆ. ಈಗ ಸುಳ್ಳುಗಾರ ನರೇಂದ್ರ ಮೋದಿ ಪರ ನಿಂತಿದ್ದೀರಿ. ಬಹುಷಃ ಬಿಜೆಪಿ ಸಾಕಷ್ಟು ಹಣ ಮತ್ತು ಆಶ್ವಾಸನೆಯನ್ನು ಬಿಜೆಪಿ ಸರಕಾರ ನೀಡಿದ್ದರಿಂದ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೀರಿ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 15 ಲಕ್ಷ ಮನೆಗಳನ್ನು ನೀಡಿದೆ. ಆದರೆ, ಈಗ ವಸತಿ ಸಚಿವ ವಿ. ಸೋಮಣ್ಣ ಅವರ ನೇತೃತ್ವದಲ್ಲಿ ಈವರೆಗೆ ಒಂದೇ ಒಂದು ಹೊಸ ಮನೆಗಳನ್ನು ನಿರ್ಮಾಣ ಮಾಡಿಲ್ಲ. ಬರೀ ಬುರುಡೆ ಬಿಡುವುದು, ಸುಳ್ಳು ಹೇಳುವುದು ಬಿಜೆಪಿಯ ಸಾಧನೆಯಾಗಿದೆ. ಕಾಂಗ್ರೆಸ್ ಯಾವುದೇ ಅಭಿಪ್ರಾಯ ಮಾಡಿಲ್ಲ ಎಂದು ಮುಖ್ಯಮಂತ್ರಿ ಸುಳ್ಳು ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರೀತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಸುಳ್ಳುಗಾರರಾಗಿದ್ದೀರಿ. ಈ ದೇಶದ ಅತೀ ಸುಳ್ಳುಗಾರರ ದಾರಿಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸುಳ್ಳು ಹೇಳುತ್ತಿರುವುದು ಜನರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಜನತೆ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಇವರು ಮಾಡುತ್ತಿರುವ ಟೀಕೆ, ಟಿಪ್ಪಣೆಗಳು ಯಾವುದೇ ಪ್ರಭಾವ ಬೀರುವುದಿಲ್ಲ. ಈ ಹಿನ್ನೆಲೆಯಲ್ಲಿ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರನ್ನು ಮತದಾರರು ಸುಮಾರು 20 ರಿಂದ 25 ಸಾವಿರ ಮತಗಳ ಭಾರಿ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎಂದು ಪ್ರಕಾಶ ರಾಠೋಡ ಹೇಳಿದರು.