ಸೆರಗು ಒಡ್ಡಿ ಮಗನ ಪರ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ತಾಯಿ ಸಿದ್ದಮ್ಮ ಮನಗೂಳಿ- ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ಸಿಗೆ ಮತ ಹಾಕಿ ಎಂದ ಸಿದ್ಧರಾಮಯ್ಯ
ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಅವರ ತಾಯಿ ಮತ್ತು ದಿ. ಶಾಸಕ ಎಂ. ಸಿ. ಮನಗೂಳಿ ಅವರ ಪತ್ನಿ ಸಿದ್ದಮ್ಮ ಮನಗೂಳಿ ಇಳಿ ವಯಸ್ಸಿನಲ್ಲಿ ತಮ್ಮ ಸೆರಗನ್ನು ಚಾಚಿ ಮತದಾರರಿಂದ ಮತಭಿಕ್ಷೆ ಕೇಳಿದ ಪ್ಸಸಂಗ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ. ಸಿಂದಗಿ ಪಟ್ಟಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದಮ್ಮ ಮನಗೂಳಿ ಮಾಜಿ ಮುಖ್ಯಮಂತ್ರಿ ಎಸ್.ಸಿದ್ಧರಾಮಯ್ಯ ಸಮ್ಮುಖದಲ್ಲಿ ತಮ್ಮ ಮಗ ಅಶೋಕ ಮನಗೂಳಿ ಪರ ಸೆರಗನ್ನು ಒಡ್ಡಿ ಮತಯಾಚಿಸಿದರು. ಇದಕ್ಕೂ […]
ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬರಲು ಸಿದ್ಧು ಕಾರಣ- ಬಿಜೆಪಿ ಜೊತೆ ಸಿದ್ಧರಾಮಯ್ಯ ಒಳಒಪ್ಪಂದ ಮಾಡಿಕೊಂಡಿದ್ದಾರೆ- ಕುಮಾರಸ್ವಾಮಿ ವಾಗ್ದಾಳಿ
ವಿಜಯಪುರ: ಬೈ ಎಲೆಕ್ಷನ್ ಬಹಿರಂಗ ಪ್ರಚಾರಕ್ಕೆ ಬುಧವಾರ ಕೊನೆಯ ದಿನವಾಗಿದ್ದು, ಜೆಡಿಎಸ್-ಕಾಂಗ್ರೆಸ್ ಆರೋಪ- ಪ್ರತ್ಯಾರೋಪ ಮುಂದುವರೆದಿದೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ಮತ್ತು ಮಾಜಿ ಸಚಿವ ಜಮೀರ ಅಹ್ಮದಖಾನ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಹಳೆಯ ನಾನಾ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಿಂಧಗಿಯಲ್ಲಿ ದೇವೇಗೌಡರ ನೇತೃತ್ವದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದೇವೆ. ಕಾಂಗ್ರೆಸ್ ಪಕ್ಷದ ನಾಯಕರು ಜೆಡಿಎಸ್ ಗೆ ಮತ ಕೊಟ್ಟರೆ ಬಿಜೆಪಿ ಗೆ ಮತ ಕೊಟ್ಟಂತೆ […]
ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕೆನ್ನುವುದು ಮತದಾರರ ಅಪೇಕ್ಷೆಯಾಗಿದೆ- ಸಚಿವೆ ಶಶಿಕಲಾ ಜೊಲ್ಲೆ
ವಿಜಯಪುರ: ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನಪರ ಯೋಜನೆಗಳು ಶೇ. 100 ರಷ್ಟು ರೈತರನ್ನು ತಲುಪಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದರಿಂದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲ್ಲಬೇಕೆನ್ನುವುದು ಜನರ ಅಪೇಕ್ಷೆಯಾಗಿದೆ. ಇದು ಅವರ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ ಹಾಗೂ […]
ಡಿಸೆಂಬರ್ ನಲ್ಲಿ ರಾಜ್ಯದ ಎಲ್ಲ ರಸ್ತೆಗಳ ದುರಸ್ಥಿ- ಬೈ ಎಲೆಕ್ಷನ್ ನಲ್ಲಿ ಜಾತಿ ರಾಜಕಾರಣ ಬೇಡ- ಸಚಿವ ಸಿ. ಸಿ. ಪಾಟೀಲ
ವಿಜಯಪುರ: ಡಿಸೆಂಬರ್ ನಲ್ಲಿ ರಾಜ್ಯಾದ್ಯಂತ ರಸ್ತೆಗಳ ದುರಸ್ಥಿ ಕಾರ್ಯ ಆರಂಭವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಹಲವು ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಕೇಂದ್ರ ಸಾರಿಗೆ ಸಚಿವ ನಿತೀನ ಗಡ್ಕರಿ ಅವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಬೈ ಎಲೆಕ್ಷನಗ ನಲ್ಲಿ ಜಾತಿ ರಾಜಕಾರಣ ಪ್ರಸ್ತಾಪಿಸುವುದು ಸರಿಯಲ್ಲ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ […]