ವಿಜಯಪುರ: ಕಂಬಳಿ ಹಾಕಿಕೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅವರೇನು ಕುರುಬನಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಈ ಹಿಂದೆ ಅಲ್ಪಸಂಖ್ಯಾತ ಬಂಧುಗಳ ಕಾರ್ಯಕ್ರಮದಲ್ಲಿ ಇದೇ ಸಿದ್ಧರಾಮಯ್ಯ ಟೋಪಿ ಹಾಕಿದ್ದನ್ನು ನೆನಪಿಸಿಕೊಳ್ಳಲಿ ಎಂದು ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ. ಸಿ. ಪಾಟೀಲ ತಿರುಗೇಟು ನೀಡಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆಡಿರುವ ಮಾತುಗಳಿಗೆ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ. ನ. 2 ರಂದು ಫಲಿತಾಂಶ ಪ್ರಕಟವಾದ ಬಳಿಕವಾದರೂ ಅವರು ತಮ್ಮ ಮಾತಿನ ಧಾಟಿ ಬದಲಿಸಿಕೊಳ್ಳಲಿ ಎಂದು ಕಿವಿಮಾತು ಹೇಳಿದರು.
ದ್ದರಾಮಯ್ಯ ಕಂಬಳಿ ಮರ್ಯಾದೆ ಕಳೆಯುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಮಾಜಿ ಮುಖ್ಯ ಮಂತ್ರಿ ಎಸ್. ಸಿದ್ಧರಾಮಯ್ಯ ಅಲ್ಪ ಸಂಖ್ಯಾತರ ಕಾರ್ಯಕ್ರಮ ಗಳಲ್ಲಿ ಟೋಪಿ ಹಾಕಿದ್ದಾರಡ. ಅದಕ್ಕೆ ಏನು ಹೇಳುತ್ತಾರೆ ಎಂದು ಖಾರವಾಗಿ ಪ್ರಶ್ನಿಸಿದರು.
ನ. 2 ರಂದು ಎಲ್ಲ ಗೊತ್ತಾಗುತ್ತದೆ ಎಂದು ಹೇಳಿದ ಅವರು, ಎಷ್ಟು ಕೂಗಾಡಿದರು ಎಷ್ಟು ಮಾತನಾಡಿದರು ಎಂಬುದು ಅಂದು ತಿಳಿಯುತ್ತದೆ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಮಾತಿನ ದಾಟಿ ಸುಧಾರಿಸಿಕೊಳ್ಳಲಿ. ಇಷ್ಟೊಂದು ಮಾತನಾಡುವ ಅವಶ್ಯಕತೆ ಇರಲಿಲ್ಲ. ಹುಚ್ಚ ಹುಚ್ಚರಂತೆ ಏನೇನೋ ಮಾತನಾಡುತ್ತಾರೆ ಎಂದು ಲೋಕೋಪಯೋಗಿ, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ. ಸಿ. ಪಾಟೀಲ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹುಚ್ಚರಂತೆ ಮಾತಾಡ್ತಾರೆ ಎಂದ ಸಿಸಿ ಪಾಟೀಲ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಂಬಳಿ ನೇಯ್ದಿದ್ದೀರಾ? ಎಂದಿದ್ದ ಸಿದ್ದರಾಮಯ್ಯಗೆ ಸಿಸಿ ಪಾಟೀಲ್ ಟಾಂಗ್ ನೀಡಿದರು.
ಸಿದ್ದರಾಮಯ್ಯ ಕಂಬಳಿ ನೇಯ್ದಿದ್ದರಾ? ಇವರು ಕಂಬಳಿ ನೇಯ್ದಿದ್ದರಾ? ಜಾತಿಯನ್ನ ರಾಜಕೀಯಕ್ಕೆ ಉಪಯೋಗಿಸಬಾರದು ಎಂದು ಹೇಳಿದ ಸಚಿವ ಸಿ. ಸಿ. ಪಾಟೀಲ, ಸಿದ್ದರಾಮಯ್ಯ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅವರು ಬಳಸಿರುವ ಮಾತುಗಳು ಮನಸ್ಸಿಗೆ ನೋವು ತಂದಿವೆ. ಮುಖ್ಯ ಮಂತ್ರಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ ಇದು ಸರಿಯಲ್ಲ ಎಂದು ಅವರು ಹೇಳಿದರು.
ಕಳೆದ 15 ದಿನಗಳಿಂದ ಸಿಂದಗಿ ಮತಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದೇವೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಪ್ರಚಾರ ನಡೆಸಿದ್ದೇವೆ. ಹೀಗಾಗಿ ಸಿಂದಗಿ ಬೈ ಎಲೆಕ್ಷನ್ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೀರ 25 ಸಾವಿರ ಮತಗಳ ಅಂತರದಿಂದ ಭರ್ಜರಿಯಾಗಿ ಗೆಲ್ಲಲಿದ್ದಾರೆ ಎಂದು ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ. ಸಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ ಉಪಸ್ಛಿತರಿದ್ದರು.