ವಿಜಯಪುರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನ ವಿಜಯಪುರದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಅಂಗವಾಗಿ ವಿಶ್ವಾದ್ಯಂತ ಏಕಕಾಲಕ್ಕೆ ಲಕ್ಷ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ ಈ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದ ಅತ್ಯುತ್ತಮ ಆಸ್ಪತ್ರೆಯಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯೂ ಒಂದಾಗಿದೆ. ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ಮತ್ತು ಸೌಲಭ್ಯ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಶಸ್ತ್ರಚಿಕಿತ್ಸಕ ಎಸ್ ಎಲ್ ಲಕ್ಕಣ್ಣನವರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜಕುಮಾರ ಯರಗಲ್ ಸೇರಿದಂದತೆ ನಾನಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಿರ್ದೇಶಕ ಉಪನಿರ್ದೇಶಕ ಡಿಎಚ್ಒ ಅಧಿಕಾರಿಗಳು ಆಸ್ಪತ್ರೆಯ ವೈದ್ಯರು ಸಿಬ್ಬಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಲ್ಲದೇ, ಈ ಸಂದರ್ಭದಲ್ಲಿ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಮಾತನಾಡುವ ಕುರಿತು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.