ರಾಪಿಡ್ ಚೆಸ್ ಚಾಂಪಿಯನಶಿಪ್ ಗೆ ಚಾಲನೆ ನೀಡಿದ ಶಾಸಕ ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ(ಅಟೋನಾಮಸ್) ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪ್ರಥಮ ಚಾಣಕ್ಯ ರಾಪಿಡ್ ಚೆಸ್ ಚಾಂಪಿಯನಶಿಪ್ ನ್ನು ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಉದ್ಘಾಟಿಸಿದರು. ಮಾಜಿ ಸಚಿವ ದಿ. ಬಿ. ಎಂ. ಪಾಟೀಲ ಅವರ ಜನ್ಮದಿನದ ಸವಿನೆನಪಿಗಾಗಿ ಎ. ಎಸ್. ಪಾಟೀಲ್ ಕಾಲೇಜ್ ಆಫ್ ಕಾಮರ್ಸ್ ಕಾಲೇಜ್ ನಲ್ಲಿ ಈ ಚಾಂಪಿಯನಶಿಪ್ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಚೆಸ್ ಆಡುವ ಮೂಲಕ ಶಾಸಕ ದೇವಾನಂದ ಚವ್ಹಾಣ ಗಮನ ಸೆಳೆದರು. […]

ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪ್ರತಿಜ್ಞಾವಿಧಿ ಬೊಧನೆ

ಬೆಂಗಳೂರು: ಮಾಜಿ ಉಪಪ್ರಧಾನಿ, ಭಾರತ ರತ್ನ ಸರ್ದಾರ ವಲ್ಲಭಬಾಯಿ ಪಟೇಲ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಪಟೇಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ವಲ್ಪಭಭಾಯಿ ಪಟೇಲ ಅವರ ಜನ್ಮದಿನದ ಅಂಗವಾಗಿ ರಾಜ್ಯ ವಿಧಾನಸಭೆ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಏಕತಾ ದಿವಸ ಆಚರಣೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334 ರಲ್ಲಿ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.  ನಂತರ ಅವರು ರಾಷ್ಟ್ರೀಯ […]

ಮತ ಎಣಿಕೆ ಕೇಂದ್ರ ಸೇರಿದ ಇವಿಎಂಗಳು- ಶೇ. 69.47 ರಷ್ಟು ಮತದಾನ- ಮಂಗಳವಾರ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಗೆ ನಡೆದ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ. 69.47 ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.    ವಿಜಯಪುರ ನಗರದ ಸೈನಿಕ ಶಾಲೆಯಲ್ಲಿರುವ ಒಡೆಯರ ಸದನದಲ್ಲಿ ಮತ ಎಣಿಕೆ ನ. 2 ರಂದು ಮಂಗಳವಾರ ನಡೆಯಲಿದ್ದು, ಶನಿವಾರ ಮತದಾನ ಮುಕ್ತಾಯಗೊಂಡ ನಂತರ ಮತದಾನಕ್ಕೆ ಬಳಸಲಾದ ಎಲ್ಲ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್ ಹಾಗೂ ಅವುಗಳಿಗೆ ಸಂಬಂಧಿಸಿದ ದಾಖಲೆ ಪತ್ರಗಳನ್ನು ತಡರಾತ್ರಿ ವಿಜಯಪುರಕ್ಕೆ ತಂದು ಭದ್ರತೆಯಲ್ಲಿ ಇಡಲಾಗಿದೆ. ಮತದಾನ ಮುಕ್ತಾಯದ […]

ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯೊಂದಿಗೆ ರೈತರ ಸಹಕಾರ ನಿರಂತರವಾಗಿರಲಿ- ಶಾಸಕ ಯಶವಂತರಾಯಗೌಡ ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಇಂಡಿ, ಸಿಂದಗಿ ಮತ್ತು ಚಡಚಣ ತಾಲೂಕುಗಳ ರೈತರ ಅನುಕೂಲಕ್ಕಾಗಿ ಸ್ಥಾಪಿಸಲಾಗಿರುವ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ ರೈತರ ಸಹಕಾರ ನಿರಂತರವಾಗಿರಲಿ ಎಂದು ಕಾರ್ಖಾನೆಯ ಅಧ್ಯಕ್ಷ ಮತ್ತು ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮಾಡಿದ್ದಾರೆ. ಇಂಡಿ ತಾಲೂಕಿನ ಮರಗೂರ ಬಳಿ ಇರುವ ಶ್ರೀ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2021-22ನೇ ವರ್ಷದ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮೂರೂ ತಾಲೂಕುಗಳ ರೈತರ ಕಲ್ಯಾಣಕ್ಕಾಗಿ ಸ್ಥಾಪಿಸಲಾಗಿರುವ ಈ […]