ಬೆಂಗಳೂರು: ಮಾಜಿ ಉಪಪ್ರಧಾನಿ, ಭಾರತ ರತ್ನ ಸರ್ದಾರ ವಲ್ಲಭಬಾಯಿ ಪಟೇಲ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಪಟೇಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ವಲ್ಪಭಭಾಯಿ ಪಟೇಲ ಅವರ ಜನ್ಮದಿನದ ಅಂಗವಾಗಿ ರಾಜ್ಯ ವಿಧಾನಸಭೆ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಏಕತಾ ದಿವಸ ಆಚರಣೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 334 ರಲ್ಲಿ ನಡೆಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಅವರು ರಾಷ್ಟ್ರೀಯ ಏಕತಾ ದಿವಸ ದ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಐಎಎಸ್ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.