ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭಾರಿ ಮುನ್ನಡೆ

ವಿಜಯಪುರ:ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ವಿಜಯಪುರ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.

ವಿಜಯಪುರ ನಗರದ ಸೈನಿಕ ಶಾಲೆ ಆವರಣದ ಒಡೆಯರ್ ಹೌಸ್ ನಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಮೊದಲನೆಯ ಸುತ್ತಿನಿಂದ ಐದನೇ ಸುತ್ತಿನವರೆಗೂ ಬಿಜೆಪಿ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ-23314, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ- 13563 ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಜೆಡಿಎಸ್-710 ಮತಗಳನ್ನು ಪಡೆದಿದ್ದಾರೆ.

ಬಿಜೆಪಿ ಅಭ್ಯರ್ಥಿ 9751 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ‌ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಮಾಹಿತಿ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌