ಕಾಂಗ್ರೆಸ್ ಮತದಾರರ ತೀರ್ಪನ್ನು ಗೌರವಿಸುತ್ತದೆ- ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಸಂಗಮೇಶ ಬಬಲೇಶ್ವರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಿಂದಗಿ ಬೈ ಎಲೆಕ್ಷನ್ ನಲ್ಲಿ ಗೆಲುವಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೇವು.  ಆದರೆ ಜನರು ವ್ಯತಿರಿಕ್ತ ತೀರ್ಪನ್ನು ನೀಡಿದ್ದಾರೆ.  ಕಾಂಗ್ರೆಸ್ ಪಕ್ಷ ಸದಾ ಜನರ ತೀರ್ಪನ್ನು ಗೌರವಿಸುತ್ತದೆ. ಸೋಲಿನ ಆತ್ಮಾವಲೋಕನ ಮಾಡಿಕೊಂಡು ಇಂದಿನಿಂದಲೇ ಪಕ್ಷ ದ ಸಂಘಟನೆಯಲ್ಲಿ ತೊಡಗುತ್ತೇವೆ ಎಂದು ತಿಳಿಸಿದ್ದಾರೆ.

ಪಕ್ಷದ ಅಭ್ಯರ್ಥಿಯ ಪರವಾಗಿ ಹಗಲಿರುಳೆನ್ನದೇ ಶ್ರಮ ವಹಿಸಿ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರಿಗೆ, ಮತ ನೀಡಿ ಆಶೀರ್ವದಿಸಿದ ಮತದಾರ ಬಂಧುಗಳಿಗೆ, ಪಕ್ಷದ ಪರವಾಗಿ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.  ಸಿಂದಗಿ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ನಮ್ಮ ಕಾರ್ಯಕರ್ತರು ಎದೆಗುಂದಬೇಕಾದ ಅಗತ್ಯವಿಲ್ಲ.  ಚುನಾವಣೆಯಲ್ಲಿ ಸೋಲು, ಗೆಲುವು ಇದ್ದದ್ದೆ.  ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಹಾಗೂ ಪಕ್ಷದ ಮುಖಂಡರೆಲ್ಲರೂ ಸೇರಿ ಕಾರ್ಯಕರ್ತರ ಆತ್ಮಗೌರವವನ್ನು ರಕ್ಷಿಸುವ ಮತ್ತು ನಿಮ್ಮ ನೋವಿಗೆ ನೇವರಿಕೆಯಾಗಿ ಕೆಲಸ ಮಾಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಹಾನಗಲ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ.  ನಮ್ಮ ಅಭ್ಯರ್ಥಿಯಾಗಿದ್ದ ಶ್ರೀನಿವಾಸ್ ಮಾನೆ ಅವರನ್ನು ಗೆಲ್ಲಿಸಿರುವ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರ ಬಂಧುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸಂಗಮೇಶ ಬಬಲೇಶ್ವರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Leave a Reply

ಹೊಸ ಪೋಸ್ಟ್‌