ಸಿಂದಗಿ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಗೆ 31085 ಮತಗಳ ಅಂತರದ ಭಾರಿ ಗೆಲುವು

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ನಿರೀಕ್ಷೆಯಂತೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. 30 ಸಾವಿರ ಮತಗಳ ಭಾರಿ ಗೆಲುವು ಸಾಧಿಸಿರುವುದು ಅಚ್ಚರಿ ಮೂಡಿಸಿದೆ.

ಬೆ. 8 ಗಂಟೆಗೆ ಆರಂಭವಾದ ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಬಿಜೆಪಿ ಅಭ್ಯರ್ಥಿ ಭಾರಿ ಮುನ್ನಡೆ ಕಾಯ್ದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮತ ಎಣಿಕೆ ಸುತ್ತುಗಳಲ್ಲಿ ಬಹುತೇಕ ಮುನ್ನಡೆ ಕಾಯ್ದುಕೊಂಡು ಗೆಲುವಿಮ ನಗೆ ಬೀರಿದರು.

ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಒಟ್ಟು ಚಲಾವಣೆಯಾದ ಮತಗಳಲ್ಲಿ ಶೇ. 50ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.

ಈ ಚುನಾವಣೆಯಲ್ಲಿ ರಮೇಶ ಭೂಸನೂರ(ಬಿಜೆಪಿ)- 93380, ಅಶೋಕ ಮನಗೂಳಿ(ಕಾಂಗ್ರೆಸ್) – 62292, ನಾಜಿಯಾ ಶಕೀಲ ಅಂಗಡಿ(4321) ಮತಗಳನ್ನು ಪಡೆದರು. ಈ ಮೂಲಕ 31088 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದರು.

Leave a Reply

ಹೊಸ ಪೋಸ್ಟ್‌