ದೀಪಾವಳಿಯ ದಿನ ಮತ್ತೆ ಕಂಪಿಸಿದ ಭೂಮಿ ರಾತ್ರಿ 8.26 ಕ್ಕೆ ಮನೆಯಿಂದ ಹೊರಗೋಡಿ ಬಂದ ಜನ- ಎಲ್ಲಿ ಗೊತ್ತಾ?

ವಿಜಯಪುರ: ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನರಿಗೆ ಭೂಮಿ ಕಂಪಿಸುವ ಮೂಲಕ ಶಾಕ್ ನೀಡಿದ ಘಟನೆ ರಾತ್ರಿ 8.26 ಕ್ಕೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ  ತಾಲೂಕಿನ ಕಳ್ಳಕವಟಗಿ, ಘೋಣಸಗಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಹುಬನೂರ, ಟಕ್ಕಳಕಿ ಗ್ರಾಮಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮೊದಲಿಗೆ ಜೋರಾಗಿ ಶಬ್ದ ಕೇಳಿ ಬಂದಿದ್ದು, ನಂತರ ಭೂಮಿ ಕಂಪಿಸಿದ ಅನುಭವವಾಗಿದೆ.  ಆಗ ಗಾಬರಿಯಾದ ಜನರು ಹೊರಗೆ ಓಡಿ ಬಂದಿದ್ದಾರೆ.  ಅತಿ ಹೆಚ್ಚು ಶಬ್ದ ಭೂಮಿಯಿಂದ ಬಂದ ಅನುಭವಾಗಿದ್ದು, ದೀಪಾವಳಿ ಸಂಭ್ರಮದಲ್ಲಿರುವ ಈ ಗ್ರಾಮಸ್ಥರಲ್ಲಿ ಆತಂಕ […]

ಸಿಂದಗಿ ಬೈ ಎಲೆಕ್ಷನ್ ಬಿಜೆಪಿ ಭರ್ಜರಿ ಗೆಲುವಿನ ಗುಟ್ಟನ್ನು ಬಿಚ್ಚಿಟ್ಟ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31085 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿರುವುದು ಸ್ವತಃ ಬಿಜೆಪಿ ನಾಯಕರಿಗೆ ಅಚ್ಚರಿ ಮೂಡಿಸಿದ್ದು, ನಿರೀಕ್ಷೆಗೂ ಮೀರಿ ಮತಗಳು ಬರಲು ಕಾರಣವೇನು ಎಂಬುದನ್ನು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ: ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಕ್ಜಿದೆ.  ಸಿಂದಗಿ ಮತದಾರರು, ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆಗಳು.  […]

ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಹಿನ್ನೆಲೆ- 65 ಕಿ, ಮೀ, ದೀಡ ನಮಸ್ಕಾರ ಆರಂಭಿಸಿದ ಅಭಿಮಾನಿ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31085 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದು, ಈ ಗೆಲುವಿಗಾಗಿ ಹರಕೆ ಹೊತ್ತಿದ್ದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಈಗ ಹರಕೆ ತೀರಿಸುತ್ತಿದ್ದಾರೆ. ರಮೇಶ ಭೂಸನೂರ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದು, ಅದೂ ಕೂಡ ಭಾರಿ ಅಂತರದಿಂದ ಗೆಲುವು ಸಾಧಿಸಿರುವದು ರಾಜ್ಯಾದ್ಯಂತ ಈಗ ಚರ್ಚೆಗೆ ಕಾರಣವಾಗಿದೆ.  ಈ ಮಧ್ಯೆ ತಮ್ಮ ನೆಚ್ಚಿನ ನಾಯಕನ ಭರ್ಜರಿ ಗೆಲುವು ತಿಳಿದ ತಕ್ಷಣದಿಂದಲೂ ಬಿಜೆಪಿ ಕಾರ್ಯಕರ್ತರು ತರಹೇವಾಹಿ […]

ಸಿದ್ಧರಾಮಯ್ಯ ದಲಿತರ ಕ್ಷಮೆ ಯಾಚಿಸಲು ಆಗ್ರಹಿಸಿ ವಿಜಯಪುರದಲ್ಲಿ ಬಿಜೆಪಿ ಮುಖಂಡರಿಂದ ಬೃಹತ್ ಪ್ರತಿಭಟನೆ

ವಿಜಯಪುರ: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ದಲಿತರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಟೀಕಿಸಿದ್ದಾರೆ ಎಂದು ಆರೋಪಿಸಲಾಗಿದೆ.  ಇದು ಬಿಜೆಪಿಯಲ್ಲಿರುವ ದಲಿತ ಮುಖಂಡರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.  ಈ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿರುವ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. […]

ವಿಜಯಪುರ ಕೇಂದ್ರಿಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ

ವಿಜಯಪುರ: ವಿಜಯಪುರದ ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಲಭಿಸಿದೆ.ಆ ಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಾಲೆಯ ಪ್ರಾಚಾರ್ಯರ ಪರವಾಗಿ ಕಂಪ್ಯೂಟರ್ ಶಿಕ್ಷಕ ಬಸವರಾಜ ಹೂಗಾರ ಪ್ರಶಸ್ತಿ ಸ್ವೀಕರಿಸಿದರು. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಗೋಳಗುಮ್ಮಟದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರಗವಹಣಾಧಿಕಾರಿ ಗೋವಿಂದರೆಡ್ಡಿ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ […]