ವಿಜಯಪುರ: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧರಾಮಯ್ಯ ದಲಿತರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಟೀಕಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಬಿಜೆಪಿಯಲ್ಲಿರುವ ದಲಿತ ಮುಖಂಡರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ನಗರದಲ್ಲಿರುವ ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಾವಯವ ಬೀಜ ಪ್ರಮಾಣನ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಬೆಳಗಾವಿ ವಲಯದ ಪ್ರಭಾರಿ ಚಂದ್ರಶೇಖರ ಕವಟಗಿ, ಬಿಜೆಪಿ ದಲಿತ ಮುಖಂಡರಾದ ಚಿದಾನಂದ ಚಲವಾದಿ, ಭರತ ಕೋಳಿ ಸೇರಿದಂತೆ ನಾನಾ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ ಮಾಜಿ ಮುಕ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕೈಯಲ್ಲಿ ಸಿದ್ಧರಾಮಯ್ಯ ಭಾವಚಿತ್ರ ಇರುವ ಭಿತ್ತಿಪತ್ರ ಹಿಡಿದಿದ್ದ ಮುಖಂಡರು, ಸಿದ್ಧರಾಮಯ್ಯ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಬರೆದ ಭಿತ್ತಿಪತ್ರ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಉಪಮೇಯರ್ ಮತ್ತು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯ್ಯಕ್ಷ ಗೋಪಾಲ ಘಟಕಾಂಬಳೆ, ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಛಲವಾದಿ ನಾರಾಯಣಸ್ವಾಮಿ ಅವರಿಗೆ ಅವಮಾನ ಮಾಡಿದ್ದಾರೆ. ದಲಿತರು ಹೊಟ್ಟೆಪಾಡಿ ಬಿಜೆಪಿಯಲಿದ್ದಾರೆ ಎಂದು ಆರೋಪ ಮಾಡುವ ಮೂಲಕ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ರಾಜ್ಯದ ದಲಿತ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ. ಅವರಿಗೆ ಧಿಕ್ಕಾರವಿದೆ ಎಂದು ಹೇಳಿದರು.
ಕಾಂಗ್ರೆಸ್ ಸ್ವಾತಂತ್ರ್ಯ ಬಂದಾಗಿನಿಂದ 50 ವರ್ಷಗಳಿಂದ ದೇಶದಲ್ಲಿ ಅಧಿಕಾರದಲ್ಲಿದ್ದರೂ ದಲಿತರ ಪರ ಯಾವುದೇ ಕೆಲಸ ಮಾಡಿಲ್ಲ. ಬರೀ ಅನ್ಯಾ ಮಾಡಿದೆ. ಬಿಜೆಪಿ ದಲಿತರ ಪರವಾಗಿ ಕೆಲಸ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಸರಕಾರಗಳು ದಲಿಪರವಾಗಿ ನಿಂತಿವೆ. ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರಿಗೆ ಯಾವ ರೀತಿ ಅವಮಾನ ಮಾಡಿದೆ ಎಂಬುದನ್ನು ದಲಿತ ಸಮುದಾಯಕ್ಕೆ ಮನವರಿಕೆಯಾಗಿದೆ. ಈ ಅವಮಾನದ ಕುರಿತು ದಲಿತರಲ್ಲಿ ಮನವರಿಕೆ ಮಾಡುತ್ತಿರುವುದರಿಂದ ಸಿದ್ಧರಾಮಯ್ಯ ಸಹಿಸದೇ ಹತಾಶರಾಗಿ ಛಲವಾದಿ ನಾರಾಯಣಸ್ವಾಮಿ ವಿರುದ್ಧ ನಿಂದನೆ ಮಾಡಿದ್ದಾರೆ. ಇದು ದಲಿತರಿಗೆ ನೋವುಂಟು ಮಾಡಿದ್ದಾರೆ. ಕೂಡಲೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.