ವಿಜಯಪುರ: ವಿಜಯಪುರದ ಪ್ರತಿಷ್ಠಿತ ಕೇಂದ್ರೀಯ ವಿದ್ಯಾಲಯಕ್ಕೆ ಪ್ಲಾಸ್ಟಿಕ್ ಮುಕ್ತ ಶಾಲೆ ಪ್ರಶಸ್ತಿ ಲಭಿಸಿದೆ.ಆ
ಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಸಮಾರಂಭದಲ್ಲಿ ಕೇಂದ್ರೀಯ ವಿದ್ಯಾಲಯಕ್ಕೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಶಾಲೆಯ ಪ್ರಾಚಾರ್ಯರ ಪರವಾಗಿ ಕಂಪ್ಯೂಟರ್ ಶಿಕ್ಷಕ ಬಸವರಾಜ ಹೂಗಾರ ಪ್ರಶಸ್ತಿ ಸ್ವೀಕರಿಸಿದರು.
ವಿಜಯಪುರ ನಗರದಲ್ಲಿರುವ ಐತಿಹಾಸಿಕ ಗೋಳಗುಮ್ಮಟದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರಗವಹಣಾಧಿಕಾರಿ ಗೋವಿಂದರೆಡ್ಡಿ ಪ್ರಶಸ್ತಿ ಪ್ರಧಾನ ಮಾಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಜಾವೀದ ಜಮಾದಾರ ಉಪಸ್ಥೊತರಿದ್ದರು.
ವಿಜಯಪುರದ ಕೇಂದ್ರೀಯ ವಿದ್ಯಾಲಯದಲ್ಲಿ ಪ್ಲಾಸ್ಟಿಕ್ ನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಲ್ಲದೇ, ಇಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ನಿಂದ ತಯಾರಾದ ವಸ್ತುಗಳನ್ನು ಬಳಸುತ್ತಿಲ್ಲ. ಈ ಶಾಲೆಯ ಆವರಣ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗಿದೆ. ಅಷ್ಟೇ ಅಲ್ಲ, ಈ ಶಾಲೆಯಲ್ಲಿ ಹಸಿರು ಕಂಗೊಳಿಸುತ್ತಿದೆ. ಇಲ್ಲಿರುವ ಸುಂದರವಾದ ಉದ್ಯಾನವನ್ನು ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಕೇಂದ್ರೀಯ ವಿದ್ಯಾಲಯಕ್ಕೆ ಸ್ವಚ್ಛ ಭಾರತ ಅಭಿಯಾನದಡಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.