ನಮ್ಮ ಮನೆಯಲ್ಲಿ 40 ಆಕಳುಗಳಿವೆ- ಗೋ ಪೂಜೆ ನಮ್ಮ ಸಂಪ್ರದಾಯ- ಸಚಿವ ಗೋವಿಂದ ಕಾರಜೋಳ
ಬೆಂಗಳೂರು: ಜಲಂಸಪನ್ಮೂಲ ಸಚಿವ ಗೋವಿಂದ ಕಾರಜೋಳ ದೀಪಾವಳಿ ಬಲಿಪಾಡ್ಯದ ಅಂಗವಾಗಿ ಗೋವಿಗೆ ಪೂಜೆ ಮಾಡಿ ಆಹಾರ ಹಾಕುವ ಮೂಲಕ ಸಂಪ್ರದಾಯ ನೆರವೇರಿಸಿದ್ದಾರೆ. ಬೆಂಗಳೂರು ನಗರದ ಮಲ್ಲೇಶ್ವರ(ಮಲ್ಲೇಶ್ವರಂ) ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಗೋ ಪೂಜೆ ಸಲ್ಲಿಸಿದ ಅವರು, ಗೋವಿಗೆ ಕರ್ಪೂರ ಬೆಳಗಿ ಬಾಳೆಹಣ್ಣು ಮತ್ತು ಇತರ ಆಹಾರ ಧಾನ್ಯಗಳನ್ನು ತಿನ್ನಿಸುವ ಮೂಲಕ ದೀಪಾವಳಿ ಬಲಿಪಾಡ್ಯವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಬಳಿಕ ಮಾತನಾಡಿದ ಅವರು, ದೀಪಾವಳಿ ಬಲಿಪಾಡ್ಯ ದಿನ ಸರಕಾರ ಆದೇಶ ಮಾಡಿದೆ ಎಂಬ ಕಾರಣಕ್ಕೆ ತಾವು ಗೋವು ಪೂಜೆ ಮಾಡಿಲ್ಲ. […]
ಮಳೆ ಸಂಬಂಧಿತ ಸಮಸ್ಯೆಗಳಿಗೆ ಸ್ಪಂದಿಸಲು ತುರ್ತು ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು: ಈ ವರ್ಷ ಅಕಾಲಿಕ ಮಳೆ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿದ್ದು, ತುರ್ತು, ಅಲ್ಪಾವಧಿ, ದೀರ್ಘಾವಧಿ ಕ್ರಮಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬಂಧಿಸಿದಂತೆ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇನ್ನೆರಡು ದಿನಗಳ ಕಾಳ ಬೆಂಗಳೂರಿನಲ್ಲಿ ಮಳೆಯಾಗುವ ಸಂಭವವಿರುವ ಬಗ್ಗೆ ಹವಾಮಾನ ಮುನ್ಸೂಚನೆ ಇದೆ. ಬೆಂಗಳೂರು ಮಳೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮಳೆಯನ್ನು ನಿಭಾಯಿಸುವ ವಿಧಾನ ಬದಲಾಯಿಸಿ, ಮಳೆಯಿಂದ ಆಗುತ್ತಿರುವ ಹಾನಿಗೆ […]
ದೀಪಾವಳಿ ಅಂಗವಾಗಿ ಬಿಡದಿ ತೋಟದಲ್ಲಿ ಗೋವಿನ ಪೂಜೆ ನೆರವೇರಿಸಿದ ಎಚ್. ಡಿ. ಕುಮಾರಸ್ವಾಮಿ ದಂಪತಿ
ರಾಮನಗರ: ದೀಪಾವಳಿ ಹಬ್ಬದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಪತ್ನಿ ಮತ್ತು ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ತಮ್ಮ ತೋಟದಲ್ಲಿ ಗೋವಿನ ಪೂಜೆ ನೆರವೇರಿಸಿದರು. ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋವು ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಗೋವು ಪೂಜೆ ಮತ್ತು ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ. […]