ದೀಪಾವಳಿ ಅಂಗವಾಗಿ ಬಿಡದಿ ತೋಟದಲ್ಲಿ ಗೋವಿನ ಪೂಜೆ ನೆರವೇರಿಸಿದ ಎಚ್. ಡಿ. ಕುಮಾರಸ್ವಾಮಿ ದಂಪತಿ

ರಾಮನಗರ: ದೀಪಾವಳಿ ಹಬ್ಬದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ತಮ್ಮ ಪತ್ನಿ ಮತ್ತು  ಶಾಸಕಿ ಅನಿತಾ ಕುಮಾರಸ್ವಾಮಿ ಜೊತೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ತಮ್ಮ ತೋಟದಲ್ಲಿ ಗೋವಿನ ಪೂಜೆ ನೆರವೇರಿಸಿದರು.

ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು.  ಇಂದ್ರನ ದಾಳಿಯಿಂದ ತನ್ನ ಗೋವು ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು.  ಆದ್ದರಿಂದಲೇ ಗೋವು ಪೂಜೆ ಮತ್ತು ಗೋವರ್ಧನ ಪೂಜೆಯನ್ನು ಆಚರಿಸಲಾಗುತ್ತದೆ.  ಕೆಲವೆಡೆ ರೈತರು ಇದನ್ನು ಹಟ್ಟಿಹಬ್ಬವೆಂದು ಆಚರಿಸುತ್ತಾರೆ ಎಂದು ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಗೋವಿನ ಪೂಜೆಗೆ ವಿಶೇಷ ಮಹತ್ವವಿದೆ.  ಈ ಹಿನ್ನೆಲೆಯಲ್ಲಿ ಬಿಡದಿಯ ನನ್ನ ತೋಟದಲ್ಲಿ ಗೋ ಪೂಜೆಯನ್ನು ನೆರವೇರಿಸಲಾಯಿತು ಎಂದು ತಿಳಿಸಿದ ಅವರು, ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಸುಡುವ ಸಮಯದಲ್ಲಿ ಕೆಲವರು ದೃಷ್ಟಿಗೆ ಹಾನಿ ಮಾಡಿಕೊಂಡಿರುವ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಯಾರೂ ಕೂಡ ಈ ಎಚ್ಚರ ತಪ್ಪಬಾರದು.  ಮಕ್ಕಳ ಬಗ್ಗೆ ಪೋಷಕರು ಗಮನ ಇಟ್ಟಿರಬೇಕು.  ಇನ್ನೂ ಮಕ್ಕಳಿಗೆ ಕೋರೋನ ಲಸಿಕೆ ಬಂದಿಲ್ಲ ಎನ್ನುವುದನ್ನು ಮರೆಯಬಾರದು ಎಂದು ಎಚ್, ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

 

Leave a Reply

ಹೊಸ ಪೋಸ್ಟ್‌