ಐತಿಹಾಸಿಗ ನಗರದಲ್ಲಿರುವ ಪ್ರಾಚೀನ ಸ್ಮಾರಕಗಳನ್ನು ವೀಕ್ಷಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ

ವಿಜಯಪುರ: ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಎರಡು ದಿನಗಳ ವಿಜಯಪುರ ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ್ದಾರೆ. ಮಧ್ಯಾಹ್ನ ಐತಿಹಾಸಿಕ ವಿಜಯಪುರ ನಗರಕ್ಕೆ ಭೇಟಿ ನೀಡಿದ ಅವರು, ವಿಶ್ವವಿಖ್ಯಾತ ಗೋಳಗುಮ್ಮಟವನ್ನು ವೀಕ್ಷಿಸಿದರು.  ಗೋಳಗುಮ್ಮಟ ಆವರಣದಲ್ಲಿರುವ ವಸ್ತು ಸಂಗ್ರಹಾಲಯ ವೀಕ್ಷಿಸಿದ ಅವರು ಟೂರಿಸ್ಟ್ ಗೈಡ್ ರಾಜಶೇಖರ ಕಲ್ಯಾಣಮಠ ಅವರಿಂದ ಮಾಹಿತಿ ಪಡೆದರು. ಬಳಿಕ ಬಾರಾ ಕಮಾನ್ ಸ್ಮಾರಕ್ಕೆ ಭೇಟಿ ನೀಡಿದ ಅವರು, ಈ ಸ್ಮಾರಕದ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಪಿ., ಎಸ್ಪಿ ಎಚ್. […]

ಬಿ ಎಲ್ ಡಿ ಇ ಸಂಸ್ಥೆಯ ಡಾ. ಆರ್. ಎಸ್. ಮುಧೋಳ ಅವರಿಗೆ ಗೌರವ ಫೆಲೋಶಿಪ್, ಡಾ. ಆರ್. ವಿ. ಕುಲಕರ್ಣಿ ಅವರಿಗೆ ಶ್ರೇಷ್ಠ ವಿಜ್ಞಾನಿ ಗೌರವ

ವಿಜಯಪುರ 8. ಡಾ. ಆರ್. ಎಸ್. ಮುಧೋಳ ಮತ್ತು ಡಾ. ಆರ್. ವಿ. ಕುಲಕರ್ಣಿ ಅವರ ಸಾಧನೆ ಬಿಎಲ್‍ಡಿಇ ಸಂಸ್ಥೆಗೆ ಮುಕುಟಪ್ರಾಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಬಿಎಲ್‍ಡಿಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಬಿಎಲ್‍ಡಿಇ ಸಂಸ್ಥೆಯಲ್ಲಿ ಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಡಾ. ಆರ್. ಎಸ್. ಮುಧೋಳ ಅವರು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಗೌರವ ಫೆಲೊಶಿಪ್ ನೀಡಿ ಗೌರವಿಸಿದೆ.  ಅಲ್ಲದೆ ಡಾ. […]

ಗಾಂಧಿಚೌಕ್ ಪೊಲೀಸರ ಭರ್ಜರಿ ಕಾರ್ಯಾಚರಣೆ- 3 ಜನ ಬೈಕ್ ಕಳ್ಳರ ಬಂಧನ, 36 ಬೈಕ್ ವಶ

ವಿಜಯಪುರ: ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ. ಮೂರು ಜನ ಬೈಕ್ ಕಳ್ಳರನ್ನು ಬಂಧಿಸುವ ಪೊಲೀಸರು ಅವರಿಂದ ಸುಮಾರು ರೂ. 21 ಲಕ್ಷ 60 ಸಾವಿರ ಮೌಲ್ಯದ 36 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಆನಂದ ಕುಮಾರ ಎಚ್. ಡಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನ ಬೈಕ್ ಕಳ್ಳರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇತ್ತೀಚೆಗೆ ವಿಜಯಪುರ ಜಿಲ್ಲೆ ಮತ್ತು ವಿಜಯಪಿರ ನಗರದಲ್ಲಿ ಬೈಕ್ […]

ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನಾಲ್ಕು ಜನ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾ ನಾಲ್ಕು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಅನಂತ ಪದ್ಮನಾಭ ಹೆಗಡೆ, ಸಿದ್ಧಯ್ಯ ರಾಚಯ್ಯ ಹಾಗೂ ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಅವರು ರಾಜ್ಯ ಹೈಕೋರ್ಟಿನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

ಗ್ರಾ. ಪಂ. ಸಿಬ್ಬಂದಿ ವೇತನ ವಿಚಾರ- 3 ತಿಂಗಳೊಳಗೆ ಸಮಿತಿ ವರದಿ ಜಾರಿಗೆ ಎಂ ಎಲ್ ಸಿ ಸುನೀಲಗೌಡ ಪಾಟೀಲ ಪತ್ರ

ವಿಜಯಪುರ: ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನ ಪಾವತಿಗೆ ಪಂಚಾಯಿತ ರಾಜ್ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿರುವ ಸರಕಾರದ ಕ್ರಮವನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಸ್ವಾಗತಿಸಿದ್ದಾರೆ.  ಅಲ್ಲದೇ, ಮೂರು ತಿಂಗಳ ಒಳಗಾಗಿ ವರದಿಯನ್ನು ಪಡೆದು, ಸಿಬ್ಬಂದಿಯ ಕುಂದು-ಕೊರತೆಗಳು ನಿವಾರಣೆ ಆಗುವ ದೃಷ್ಠಿಯಿಂದ ಕೂಡಲೇ ವರದಿಯನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಹಾಗೂ ಪಂಚಾಯಿತಿ ರಾಜ್ ಆಯುಕ್ತರಿಗೆ ಪತ್ರ ಬರೆದಿರುವ ಅವರು, ಗ್ರಾಮ […]