ಎಂ ಎಲ್ ಸಿ ದ್ವಿ ಸದಸ್ಯ ಸ್ಥಾನಕ್ಕೆ ಚುನಾವಣೆ- ಅಖಂಡ ವಿಜಯಪುರ ಜಿಲ್ಲೆಯ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪಿ ಸುನೀಲ ಕುಮಾರ

ವಿಜಯಪುರ: ಅಖಂಡ ವಿಜಯಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಕ್ಕೆ ನಡೆಯಲಿರುವ ವಿಧಾನ ಪರಿಷತ ಚುನಾವಣೆಯ ಸಿದ್ಧತೆಗಳ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳನ್ನೊಳಗೊಂಡಿರುವ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ವಿಧಾನ ಪರಿಷತ್ ಕ್ಷೇತ್ರದ ಎರಡು ಸ್ಥಾನಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಎಂದು ತಿಳಿಸಿದರು. ಕೇಂದ್ರ ಚುನಾವಣೆ ಆಯೋಗ ಚುನಾವಣೆಗೆ ದಿನಾಂಕ ನಿಗದಿ ಮಾಡಿದೆ.  ಈಗ ಹಾಲಿ ಸದಸ್ಯರಾಗಿರುವ ಕಾಂಗ್ರೆಸ್ಸಿನ ಎಸ್. ಆರ್. […]

ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ವಕೀಲರೊಂದಿಗೆ ಚರ್ಚೆ ಹಿನ್ನೆಲೆ- ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಆರ್. ಟಿ. ನಗರದ ನಿವಾಸದ ಬಳಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ‌ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.