ಬೆಂಗಳೂರು: ಅಂತಾರಾಜ್ಯ ಜಲ ವಿವಾದಗಳ ಕುರಿತು ಹಾಗೂ ರಾಜ್ಯಕ್ಕೆ ಸಂಬಂಧಿಸಿದ ಇತರೆ ವಿಷಯಗಳ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಲು ನವ ದೆಹಲಿಗೆ ತೆರಳುತ್ತಿರುವುದಾಗಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನವದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಆರ್. ಟಿ. ನಗರದ ನಿವಾಸದ ಬಳಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಮಯ ಕೋರಲಾಗಿದೆ. ಖಾಸಗಿ ಚಾನೆಲ್ವೊಂದರ ಆಲ್ ಇಂಡಿಯಾ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.