ವಿ.ಪ. ಚುನಾವಣೆ- ವಿಜಯಪುರ-ಬಾಗಲಕೋಟೆಯಿಂದ ಒಬ್ಬ ಅಭ್ಯರ್ಥಿ ಕಣಕ್ಕಿಳಿಸಲು ಚಿಂತನೆ- ಸಿದ್ಧರಾಮಯ್ಯ, ಡಿಕೆಶಿಗೆ ಕೆಲಸವಿಲ್ಲ- ಎಂ ಎಲ್ ಸಿ ಎನ್. ರವಿಕುಮಾರ
ವಿಜಯಪುರ: ವಿಧಾನ ಪರಿಷತ್ತಿನ ವಿಜಯಪುರ ಕ್ಸೇತ್ರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸುವ ಕುರಿತು ಚರ್ಚೆ ನಡೆದಿದ್ದು, ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವಿಧಾನ ಪರಿಷತ ಚುನಾವಣೆಯಲ್ಲಿ ರಾಜ್ಯಾದ್ಯಂತ ಕನಿಷ್ಠ 15 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ ಎಂದು ತಿಳಿಸಿದರು. ವಿಧಾನ ಪರಿಷತ್ ಚುನಾವಣೆ […]
ಬಿಜೆಪಿ ಮೊದಲು ದಲಿತರನ್ನು ಸಿಎಂ ಮಾಡಲಿ- ಮಾಜಿ ಸಿಎಂ ಎಸ್. ಸಿದ್ಧರಾಮಯ್ಯಗೆ ದಲಿತ ಪರ ಇರುವಷ್ಟು ಕಾಳಜಿ ಬೇರಾರಿಗೂ ಇಲ್ಲ- ಎಂ. ಬಿ. ಪಾಟೀಲ
ವಿಜಯಪುರ: ಬಿಜೆಪಿ ಈಗ ಅಧಿಕಾರದಲ್ಲಿದ್ದು ಮೊದಲು ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ಬಿಜೆಪಿಗೆ ಸವಾಲು ಹಾಕಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿರುವ ದಲಿತ ನಾಯಕರ ಕುರಿತು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಆಡಿರುವ ಮಾತಿನ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿದ್ಧರಾಮಯ್ಯ ದಲಿತರ ಬಗ್ಗೆ ಹೇಳಿಲ್ಲ. ದಲಿತರನ್ನು ಉಪಯೋಗಿಸಿಕೊಳ್ಳಬಾರದು ಎಂಬ ದೃಷ್ಠಿಯಿಂದ ಮಾತನಾಡಿದ್ದಾರೆ. ದಲಿತರ ಬಗ್ಗೆ ಸಿದ್ಧರಾಮಯ್ಯ ಅವರಿಗೆ ಇರುವಷ್ಟು ಕಾಳಜಿ ಮೇಲ್ವರ್ಗ ಅಷ್ಟೇ ಅಲ್ಲ, ದಲಿತರಿಗೂ ಇಲ್ಲ. ಅವರು […]
ಬಿಟ್ ಕಾಯಿನ್ ಪ್ರಕರಣ- ಶೇ. 100 ರಷ್ಟು ದಾಖಲೆ ಸಂಗ್ರಹ- ಸೂಕ್ತ ಸಮಯದಲ್ಲಿ ಬಿಡುಗಡೆ- ಡಿ. ಕೆ. ಶಿವಕುಮಾರ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ ಸಂಬಂಧ ಶೇ. 100ರಷ್ಟು ಪರ್ಸೆಂಟ್ ದಾಖಲೆ ಸಂಗ್ರಹಿಸುತ್ತಿದ್ದೇವೆ. ಸೂಕ್ತ ಸಮಯ ಬಂದಾಗ ಅದನ್ನು ಬಿಡುಗಡೆ ಮಾಡುತ್ತೇವೆ. ನಾವು ಹೋಗಿ ಯಾವುದೇ ದಾಖಲೆ ಹುಡುಕುತ್ತಿಲ್ಲ. ಸರಕಾರದ ಮಂತ್ರಿಗಳು, ಅಧಿಕಾರಿಗಳೇ ನಮಗೆ ಅದನ್ನು ಒದಗಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ತಿಳಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮಾಹಿತಿ ನೀಡಿದರು. ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ಗಂಭೀರ ಆರೋಪ ಮಾಡುತ್ತಿದ್ದರೂ ಬಿಜೆಪಿ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದರ […]
ರೈತರಿಗೆ ಮೋಸ ತಪ್ಪಿಸಲು ತಾನೇ ಸ್ವತಃ ಡ್ರ್ಯಾಗನ್ ಫ್ರೂಟ್ ಸಸಿ ತಯಾರಿಸಿ ಮಾರಾಟ- ಆದಾಯ ಕಂಡುಕೊಂಡ ಯುವರೈತನ ಯಶೋಗಾಥೆ
ವಿಜಯಪುರ: ಡ್ರ್ಯಾಗನ್ ಫ್ರೂಟ್ ಇತ್ತೀಚಿನ ವರ್ಷಗಳಲ್ಲಿ ಅತೀ ಹೆಚ್ಚು ಗಮನ ಸೆಳೆಯುತ್ತಿರುವ ಹಣ್ಣು. ಇದರಲ್ಲಿರುವ ಔಷಝಿಯ ಗುಣಗಳು ನಾನಾ ರೀತಿಯ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ರಾಮಬಾಣವಾಗಿವೆ. ಈ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗುತ್ತಿರುವುದರಿಂದ ಇದನ್ನು ಕೃಷಿ ಮಾಡುತ್ತಿರುವ ರೈತರ ಸಂಖ್ಯೆಯೂ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೆ, ಈ ಬೇಡಿಕೆಯ ಲಾಭವನ್ನು ದುರ್ಲಾಭ ಮಾಡಿಕೊಂಡ ಕೆಲವು ವ್ಯಕ್ತಿಗಳು ಮತ್ತು ಕಂಪನಿಗಳು ಕಳಪೆ ಗುಣಮಟ್ಟದ ಸಸಿಗಳನ್ನು ಮಾರಾಟ ಮಾಡಿದ ಪರಿಣಾಮ ಹಲವಾರು ರೈತರು ಮೋಸ ಹೋಗಿರುವ ಘಟನೆಗಳೂ ನಡೆದಿವೆ. ಈ ಹಿನ್ನೆಲೆಯಲ್ಲಿ […]