ತಾಯಂದಿರು ಮಕ್ಕಳಿಗೆ ಪಿಸಿವಿ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು- ಡಿಸಿ ಪಿ ಸುನಿಲ್ ಕುಮಾರ ಕರೆ
ವಿಜಯಪುರ: ಮಕ್ಕಳಿಗೆ ಭವಿಷ್ಯದಲ್ಲಿ ಮಾರಕ ಕಾಯಿಲೆಗಳಿಂದ ರಕ್ಷಿಸಲು ತಾಯಂದಿರು ತಂತಮ್ಮ ಮಕ್ಕಳಿಗೆ ಪಿಸಿವಿ ಲಸಿಕೆಯನ್ನು ಹಾಕಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಕರೆ ನೀಡಿದ್ದಾರೆ. ವಿಜಯಪುರ ನಗರದ ದರ್ಗಾ ಪ್ರದೇಶದಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ನ್ಯೂಮೊಕಾಕಲ್ ಕಾಂಜುಗೇಟ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಒಂದು ಹೊಸ ಪಿಸಿವಿ ಲಸಿಕೆಯನ್ನು ಪರಿಚಯಿಸಲಾಗುತ್ತಿದೆ. ಇದು ನ್ಯೂಮೊಕಾಕಸ್ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ನ್ಯೂಮೋನಿಯಾ ಮತ್ತು ಮೆನಿಂಜೈಟಿಸ್ ಕಾಯಿಲೆಗಳಿಂದ […]
ವಿ. ಪ. ಚುನಾವಣೆ: ಸಿದ್ಧರಾಮಯ್ಯ, ಡಿಕೆಶಿ ಭೇಟಿ ಮಾಡಿದ ವಿಜಯಪುರ ಕಾಂಗ್ರೆಸ್ ಮುಖಂಡರು
ವಿಜಯಪುರ: ವಿಧಾನ ಪರಿಷತ ಚುನಾವಣೆ ದಿನಾಂಕ ನಿಗದಿಯಾಗಿದ್ದು, ವಿಜಯಪುರ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ದ್ವಿಸದಸ್ಯ ಸ್ಥಾನಕ್ಕೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯಪುರದಿಂದ ಹಾಲಿ ಸದಸ್ಯ ಸುನಿಲಗೌಡ ಪಾಟೀಲ ಅವರಿಗೆ ಮತ್ತೆ ಟಿಕೆಟ್ ನೀಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ಬೆಂಗಳೂರಿಗೆ ತೆರಳಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಟಿದ ಸಂಗತಿಯನ್ನು ಕಾಂಗ್ರೆಸ್ ನಾಯಕರಾದ ಎಸ್. ಸಿದ್ಧರಾಮಯ್ಯ ಮತ್ತು ಡಿ. ಕೆ. ಶಿವಕುಮಾರ ತಮ್ಮ ಫೇಸ್ […]
ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ವಿಜಯಪುರ: ಆಂಧ್ರ ಪ್ರದೇಶ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಪತಿ ಶ್ರೀ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದರ್ಶನ ಪಡೆದರು. ನಂತರ ಟಿಟಿಡಿ ವತಿಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಮುನಿರತ್ನ, ಶಾಸಕ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.
ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ತಿರುಪತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ರೂ. 200 ಕೋ. ವೆಚ್ಚದಲ್ಲಿ ಇಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ. ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ. ಸುಧಾಕರ, ಮುನಿರತ್ನ, ಬೆಂಗಳೂರು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ […]
ವಿದ್ಯಾರ್ಥಿಗಳು ಭವ್ಯ ಭಾರತ ಕಟ್ಟುವಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ನಡೆಯಬೇಕು- ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಎನ್, ನಾಯಕ
ವಿಜಯಪುರ: ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳಾಗಿದ್ದು. ಭವ್ಯ ಭಾರತ ಕಟ್ಟುವ ನಿಟ್ಟಿನಲ್ಲಿ ದಿಟ್ಟ ಗುರಿಯೊಂದಿಗೆ ಶಿಕ್ಷಕರ ಮಾರ್ಗದರ್ಶನದಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಬೇಕು. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆಯಿಂದ ಹಾಗೂ ಸಮಚಿತ್ತದಿಂದ ಅಧ್ಯಯನ ನಡೆಸಿ ಯಶಸ್ಸಿನೆಡೆಗೆ ಸಾಗಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಸದಾನಂದ ಎನ್. ನಾಯಕ ಹೇಳಿದ್ದಾರೆ. ವಿಜಯಪುರ ನಗರದ ಪಿ, ಡಿ, ಜೆ ಶಾಲೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ […]