ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತಿರುಪತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಿಗ್ಗೆ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ನಿರ್ಮಾಣದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.

ರೂ. 200 ಕೋ. ವೆಚ್ಚದಲ್ಲಿ ಇಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದೆ.  ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕರ್ನಾಟಕ ಭವನವನ್ನು ಲೋಕಾರ್ಪಣೆ ಮಾಡುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಿಎಂ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ. ಕೆ. ಸುಧಾಕರ, ಮುನಿರತ್ನ, ಬೆಂಗಳೂರು ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಗುಪ್ತವಾರ್ತೆ ಇಲಾಖೆಯ ಎಡಿಜಿಪಿ ದಯಾನಂದ, ಟಿಟಿಡಿ ನಿರ್ದೇಶಕ ಎಂ‌. ಎನ್. ಶಶಿಧರ ಮುಂತಾದವರು ಉಪಸ್ಥಿತರಿದ್ದರು.

ರವಿವಾರ ರಾತ್ರಿ ಸಿಎಂ ಭೇಟಿ ಮಾಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ

ಇದಕ್ಕೂ ಮೊದಲು ರವಿವಾರ ರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನಮೋಹನ ರೆಡ್ಡಿ ಅವರು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ, ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌