ತಿರುಪತಿಯಲ್ಲಿ ಶ್ರೀ ವೆಂಕಟೇಶ್ವರ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ಆಂಧ್ರ ಪ್ರದೇಶ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಪತಿ ಶ್ರೀ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ.

ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದರ್ಶನ ಪಡೆದರು.

ನಂತರ ಟಿಟಿಡಿ ವತಿಯಿಂದ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಡಾ. ಸುಧಾಕರ್, ಮುನಿರತ್ನ, ಶಾಸಕ ಎಸ್. ಆರ್. ವಿಶ್ವನಾಥ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌