ವಿಪ ಚುನಾವಣೆ: ಬಿಜೆಪಿಯಿಂದ ಪಿ. ಎಚ್. ಪೂಜಾರ ಅವರಿಗೆ ಟಿಕೆಟ್- ಉಳಿದ ಕ್ಷೇತ್ರಗಳ ಮಾಹಿತಿ ಇಲ್ಲಿದೆ

ನವದೆಹಲಿ: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ಎರಡು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ‌ ಓರ್ವ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿದೆ. ಬಾಗಲಕೋಟೆಯ ಮಾಜಿ ಶಾಸಕ ಪಿ. ಎಚ್. ಪೂಜಾರ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡುವ ಮೂಲಕ‌ ಎರಡರಲ್ಲಿ ಒಂದು ಸ್ಥಾನವನ್ನು ಗೆಲ್ಲಲು ಪ್ಲಾನ್ ಮಾಡಿದೆ. ಉಳಿದ ಕ್ಷೇತ್ರಗಳ ಮಾಹಿತಿ ಇಲ್ಲಿದೆ.

ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ನ್ಯಾಕ್ ನಿಂದ ‘ಎ’ ಗ್ರೇಡ್ ಮಾನ್ಯತೆ- ಎಂ. ಬಿ. ಪಾಟೀಲ

ವಿಜಯಪುರ: ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ದೊರೆತಿದೆ ಎಂದು ಬಿ ಎಲ್ ಡಿ ಇ ಅಧ್ಯಕ್ಷ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು ನ. 11 ರಿಂದ 13ರ ವರೆಗೆ ನ್ಯಾಕ್ ಸದಸ್ಯರು ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು.‌ ಇಲ್ಲಿನ ಮೂಲಭೂತ ಸೌಕರ್ಯಗಳು, ಪಠ್ಯಕ್ರಮ […]

ಇಂದಿರಾ ಗಾಂಧಿ ಜನ್ಮದಿನದ ಅಂಗವಾಗಿ ಐಕ್ಯತಾ ದಿನಾಚರಣೆ- ಪ್ರಮಾಣ ವಚನ ಬೋಧಿಸಿದ ಸಿಎಂ

ಬೆಂಗಳೂರು: ದೇಶದ ಏಕತೆ, ಅಖಂಡತೆ ಮತ್ತು ಸಮಗ್ರತೆ ಕಾಪಾಡಲು ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಅಂಗವಾಗಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಐಕ್ಯತಾ ಪ್ರಮಾಣ ವಚನ ಬೋಧಿಸಿ ಅವರು‌ ಮಾತನಾಡಿದರು. ಭಾರತ ಹಲವಾರು ಭಾಷೆಗಳು, ಸಾಂಸ್ಕೃತಿಕ ಹಿನ್ನೆಲೆ ಮತ್ತು ಸಂಸ್ಕೃತಿಗಳಿಂದ ಕೂಡಿರುವ ದೇಶ. ಭಾರತ ಒಗ್ಗಟ್ಟಾಗಿ, ಒಕ್ಕೂಟವಾಗಿ, ಸ್ವತಂತ್ರವಾಗಿ 75 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ಉಳಿಸಿಕೊಂಡು […]

ಮೂರು ಕೃಷಿ ಕಾನೂನು ಹಿಂಪಡೆಯುವ ಘೋಷಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ಹಿಂಒಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೊಷಿಸಿದ್ದಾರೆ. ದೇಶವನ್ನು ಉದ್ದೇಶಿಸಿ ಬೆಳಿಗ್ಗೆ ಮಾತನಾಡಿದ ನರೇಂದ್ರ ಮೋದಿ, ಇಂದು ನಾನು ತಮಗೆಲ್ಲ ಈ ವಿಚಾರವನ್ನು ತಿಳಿಸಲು ಬಂದಿದ್ದೇನೆ. ನಾವು ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ದೇಶದ ರೈತರಿಗೆ ಮತ್ತು ಸಣ್ಣ ರೈತರಿಗೆ ಶಕ್ತಿ ಬರಲಿ‌ ಅವರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗಲು ತಮ್ಮ ಬೆಳೆಗಳನ್ನು ತಮಗೆ ಇಷ್ಟವಾದ ಕಡೆ ಮಾರಾಟ ಮಾಡಲು ಹೆಚ್ಚಿನ ಅವಕಾಶ ಕಲ್ಪಿಸಲು ಈ ಕಾನೂನುಗಳನ್ನು ಜಾರಿಗೆ ತಂದಿದ್ದೇವು. ಈ […]