ವಿಜಯಪುರದಲ್ಲಿ 12 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ-ಇಲ್ಲಿದೆ ಸಂಪೂರ್ಣ ಮಾಹಿತಿ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಒಟ್ಟು 12 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ತಿಳಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿವರ ಇಂತಿದೆ. ದುರಗಪ್ಪ ಸಿದ್ಧಾಪೂರ(ಪಕ್ಷೇತರ), ಪಿ. ಎಚ್. ಪೂಜಾರಿ(ಬಿಜೆಪಿ), ಸುನೀಲಗೌಡ ಪಾಟೀಲ(ಕಾಂಗ್ರೆಸ್), ಮಲ್ಲಿಕಾರ್ಜುನ ಕೆಂಗನಾಳ(ಪಕ್ಷೇತರ), ಗುರಲಿಂಗಪ್ಪ ಅಂಗಡಿ(ಪಕ್ಷೇತರ), ಮಲ್ಲಿಕಾರ್ಜುನ ಎಸ್. ಲೋಣಿ(ಪಕ್ಷೇತರ), ಕಾಂತಪ್ಪ ಶಂಕ್ರೇಪ್ಪ ಇಂಚಗೇರಿ(ಪಕ್ಷೇತರ), ಶ್ರೀಮಂತ ಬಾರಿಕಾಯಿ(ಪಕ್ಷೇತರ), ತುಳಸಪ್ಪ ದಾಸರ(ಪಕ್ಷೇತರ), ಗೊಲ್ಲಾಳಪ್ಪಗೌಡ ಪಾಟೀಲ(ಪಕ್ಷೇತರ), ಕಾಶಿಮಪಟೇಲ ಹುಸೇನಪಟೇಲ ಪಾಟೀಲ(ಪಕ್ಷೇತರ), ಬಸವರಾಜ ಯರನಾಳ(ಪಕ್ಷೇತರ),

ಎಸ್. ಆರ್. ಪಾಟೀಲಗೆ ಟಿಕೆಟ್ ಸಿಗದಿರಲು ಕಾರಣ ಬಿಚ್ಚಿಟ್ಟ ಮಾಜಿ ಸಚಿವ ಸಿ. ಎಸ್. ನಾಡಗೌಡ- ಸುನೀಲಗೌಡ ಪಾಟೀಲ ಗೆಲ್ಲಿಸಲು ಉಭಯ ಜಿಲ್ಲೆಗಳ ಕಾಂಗ್ರೆಸ್ ನಾಯಕರ ಸಂಕಲ್ಪ

ವಿಜಯಪುರ: ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಅವರಿಗೆ ಈ ಬಾರಿ ಟಿಕೆಟ್ ತಪ್ಪು ಕಾರಣ ಏನು ಎಂಬುದು ಎಲ್ಲರಿಗೂ ಕುತೂಹಲ ಕೆರಳಿಸಿತ್ತು.  ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಮಾಜಿ ಸಚಿವ ಸಿ. ಎಸ್. ನಾಡಗೌಡ ಏನು ಕಾರಣ ಎಂಬುದನ್ನು ಮಾರ್ಮಿಕವಾಗಿ ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2018ರಲ್ಲಿ ವಿಧಾನ ಪರಿಷತ್ ಬೈ ಎಲೆಕ್ಷನ್ ನಲ್ಲಿ ಸುನೀಲಗೌಡ ಪಾಟೀಲ ಅವರಿಗೆ ಒತ್ತಾಯದಿಂದ ಕಣಕ್ಕಿಳಿಸಿದ್ದೇವು. […]

ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಪುರ ಮತಕ್ಷೇತ್ರದಿಂದ ಎಂ ಎಲ್ ಸಿ ಸುನಿಲಗೌಡ ಪಾಟೀಲ ನಾಮಪತ್ರ ಸಲ್ಲಿಸಿದ ಬಳಿಕ ಹೇಳಿದ್ದೇನು ಗೊತ್ತಾ?

ವಿಜಯಪುರ: ವಿಧಾನ ಪರಿಷತನ‌ ವಿಜಯಪುರ ಮತಕ್ಷೇತ್ರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಎಂ ಎಲ್ ಸಿ ಸುನಿಲಗೌಡ ಪಾಟೀಲ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಅವರು ವಿಜಯಪುರ ಜಿಲ್ಲೆಯ ಮುಮ್ಮಟ್ಟಿಗುಡ್ಡದ ಅಮೋಘಸಿದ್ಧ ಮತ್ತು ತಮ್ಮ ಗ್ರಾಮ ತೊರವಿಯ ಲಕ್ಕವ್ವ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಗೆಲುವು ಸುಲಭವಾಗಿರಲಿ ಎಂದು ದೇವರಲ್ಲಿ ಪ್ರಾರ್ಥನೆ ನಡೆಸಿದರು. ಬಳಿಕ ವಿಜಯಪುರ ನಗರದ ಗ್ರಾಮ ದೇವತೆಯಾದ […]

ಎಂ ಎಲ್ ಸಿ ಸುನೀಲಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲ ನಾಮಪತ್ರ ಸಲ್ಲಿಸಲಿದ್ದಾರೆ. ಬೆ. 10.30ಕ್ಕೆ ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ಜನಪ್ರತಿನಿಧಿಗಳು ಮತ್ತು ಮುಖಂಡರು ಉಪಸ್ಥಿತರಿರಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಇಂದು ಮತ್ತೋಮ್ಮೆ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಪಿ. ಎಚ್. ಪೂಜಾರ ಎರಡನೇ ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿರುವ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.