ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಶಾಸಕ ಪಿ. ಎಚ್. ಪೂಜಾರ ಎರಡನೇ ಬಾರಿ ನಾಮಪತ್ರ ಸಲ್ಲಿಸಲಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಲಿರುವ ಅವರು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಬಿಜೆಪಿ ಜನಪ್ರತಿನಿಧಿಗಳು ಮತ್ತು ಮುಖಂಡರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಲಿದ್ದಾರೆ.