ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯಪುರ ಮತಕ್ಷೇತ್ರದಿಂದ ಎಂ ಎಲ್ ಸಿ ಸುನಿಲಗೌಡ ಪಾಟೀಲ ನಾಮಪತ್ರ ಸಲ್ಲಿಸಿದ ಬಳಿಕ ಹೇಳಿದ್ದೇನು ಗೊತ್ತಾ?

ವಿಜಯಪುರ: ವಿಧಾನ ಪರಿಷತನ‌ ವಿಜಯಪುರ ಮತಕ್ಷೇತ್ರದ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಮತ್ತು ಹಾಲಿ ಎಂ ಎಲ್ ಸಿ ಸುನಿಲಗೌಡ ಪಾಟೀಲ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಅವರು ವಿಜಯಪುರ ಜಿಲ್ಲೆಯ ಮುಮ್ಮಟ್ಟಿಗುಡ್ಡದ ಅಮೋಘಸಿದ್ಧ ಮತ್ತು ತಮ್ಮ ಗ್ರಾಮ ತೊರವಿಯ ಲಕ್ಕವ್ವ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಗೆಲುವು ಸುಲಭವಾಗಿರಲಿ ಎಂದು ದೇವರಲ್ಲಿ ಪ್ರಾರ್ಥನೆ ನಡೆಸಿದರು.

ಬಳಿಕ ವಿಜಯಪುರ ನಗರದ ಗ್ರಾಮ ದೇವತೆಯಾದ ಶ್ರೀ ಸಿದ್ಧರಾಮೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಂ. ಬಿ. ಪಾಟೀಲ, ಪ್ರೊ. ರಾಜು ಆಲಗೂರ ಮುಂತಾದವರು ಉಪಸ್ಥಿತರಿದ್ದರು.

@

ನಂತರ ಅಲ್ಲಿಂದ ನೇರವಾಗಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸುನೀಲಗೌಡ ಪಾಟೀಲ ಎರಡು ಬಾರಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ಅವರು ತಮ್ಮ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಆನಂದ ನ್ಯಾಮಗೌಡ, ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮಾಜಿ ಸಚಿವರಾದ ಸಿ. ಎಸ್. ನಾಡಗೌಡ, ಆರ್. ಬಿ. ತಿಮ್ಮಾಪುರ‌ ಸೇರಿದಂತೆ ವಿಜಯಪುರ ಮತ್ತು ಬಾಗಲಕೋಟೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ತಮ್ಮ ಮೇಲೆ ವಿಶ್ವಾಸವಿಟ್ಟು ಟಿಕೆಟ್ ನೀಡಿದೆ. ಇದು ತಾವು ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಕೆಲಸ ಮಾಡಲು ಹುಮ್ಮಸ್ಸು ನೀಡಿದೆ. ತಾವು ಮೊದಲ ಬಾರಿಗೆ ಆಯ್ಕೆಯಾಗಿ ಮೂರು ವರ್ಷ ಜನಸೇವೆ ಮಾಡಿದ್ದೇನೆ. ಕೊರೊನಾ ಕಾಲದಲ್ಲಿ ಲಭ್ಯವಿದ್ದ ಅನುದಾನ ಮತ್ತು ವೈಯಕ್ತಿಕವಾಗಿಯೂ ಜನರ ಸೇವೆ ಮಾಡಿರುವುದಾಗಿ ತಿಳಿಸಿದರು.

ಅಲ್ಲದೇ, ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಬೆಂಬಲಿಂದಾಗಿ ಮೊದಲ ಸುತ್ತಿನಲ್ಲಿಯೇ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಅಲ್ಲದೇ, ವಿಧಾನ ಪರಿಷತ ಪ್ರತಿಪಕ್ಷದ ನಾಯಕ ಎಸ್. ಆರ್. ಪಾಟೀಲ ಅವರೂ ಕೂಡ ತಮ್ಮ ಗೆಲುವುಗೆ ಶ್ರಮಿಸಲಿದ್ದಾರೆ ಎಂದು ತಿಳಿಸಿದರು.

ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಹಾಲಿ ಮತ್ತು ಮಾಜಿ ಶಾಸಕರು ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಅಲ್ಲದೆ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾದ ಎಸ್. ಆರ್. ಪಾಟೀಲ್ ಅವರು ಕೂಡ ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು ಅಷ್ಟೇ ಅಲ್ಲದೆ ನಾನು ಯುವಕನಾಗಿ ಇರುವುದರಿಂದ ನನಗೆ ಟಿಕೆಟ್ ಕೊಡಿ ಎಂದು ಕೂಡ ಎಸ್ಆರ್ ಪಾಟೀಲ್ ಅವರು ಹೇಳಿದರು ಆದರೆ ಅವರು ನನಗೆ ಬೆಂಬಲಿಸಿದ್ದಾರೆ ಎಂದು ಸುನಿಲಗೌಡ ಪಾಟೀಲ ತಿಳಿಸಿದರು ಅಲ್ಲದೆ ನಾನು ಮೂರು ವರ್ಷದ ಅವಧಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಾಧ್ಯಕ್ಷರು ಅಧ್ಯಕ್ಷರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ವೇತನವನ್ನು ಹೆಚ್ಚಿಸಲು ಒತ್ತಾಯ ಮಾಡಿದ್ದೇನೆ. ನಾನು ಮಾಡಿದ ಒತ್ತಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕೂಡ ಬೆಂಬಲ ವ್ಯಕ್ತಪಡಿಸಿದ್ದರು. ಈಗ ಸರಕಾರ ಸ್ಥಳೀಯ ಜನಪ್ರತಿನಿಧಿಗಳಿಗೆ ವೇತನ ಚಲ ಮಾಡುವುದಾಗಿ ಹೇಳುತ್ತಿದೆ ಎಂದು ತಿಳಿಸಿದರು.

ನಾನು ಕಳೆದ ಬಾರಿ ಗಳಿಸಿದ ಮತಗಳಿಗಿಂತ ಹೆಚ್ಚಿನ ಮತಗಳನ್ನು ಈ ಬಾರಿ ಚುನಾವಣೆಯಲ್ಲಿ ಪಡೆಯಲಿದ್ದೇನೆ ಅಲ್ಲದೆ ಗ್ರಾಮ ಪಂಚಾಯಿತಿ, ತಾಲೂಕು, ಪಂಚಾಯಿತಿ ಜಿಲ್ಲಾ ಪಂಚಾಯಿತಿ, ಸ್ಥಳೀಯ ಜನಪ್ರತಿನಿಧಿಗಳ ಪ್ರತಿನಿಧಿಯಾಗಿ ಅವರಿಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳ ಬಗ್ಗೆ ಕೆಲಸ ಮಾಡಲಿದ್ದೇನೆ ಎಂದು ಸುನಿಲಗೌಡ ಪಾಟೀಲ ತಿಳಿಸಿದರು.

 

Leave a Reply

ಹೊಸ ಪೋಸ್ಟ್‌