ಎಂ ಎಲ್ ಸಿ ಸುನೀಲಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲ ನಾಮಪತ್ರ ಸಲ್ಲಿಸಲಿದ್ದಾರೆ.

ಬೆ. 10.30ಕ್ಕೆ ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಅವರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಸಂದರ್ಭದಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕಾಂಗ್ರೆಸ್ ಜನಪ್ರತಿನಿಧಿಗಳು ಮತ್ತು ಮುಖಂಡರು ಉಪಸ್ಥಿತರಿರಲಿದ್ದಾರೆ.

Leave a Reply

ಹೊಸ ಪೋಸ್ಟ್‌