ನಿಗದಿತ ಅವಧಿಯೊಳಗೆ ಜಂತುಹುಳು ಮಾತ್ರೆ ಒದಗಿಸಿ- ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ನಿಗದಿತ ಅವಧಿಯೊಳಗೆ ಒಂದರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ತಪ್ಪದೇ ನಿರ್ದಿಷ್ಟ ಪ್ರಮಾಣದ ಜಂತುಹುಳು ನಿವಾರಣೆ ಮಾತ್ರೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಹೇಳಿದ್ದಾರೆ‌.

ವಿಜಯಪುರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಹಿನ್ನೆಲೆ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಿ ಅವರು ಮಾತನಾಡಿದರು.

ಜಂತುಹುಳು ನಿವಾರಣೆ ಮಾತ್ರೆಯು ಮಕ್ಕಳು ಮತ್ತು ವಯಸ್ಕರಿಗೆ ಸಮಾನವಾಗಿ ಸುರಕ್ಷಿತ ಔಷಧಿಯಾಗಿದೆ ಎಂದು ಅವರು ತಿಳಿಸಿದರು.

ರಾಷ್ಟ್ರೀಯ ಜಂತುಹುಳು ನಿವಾರಣೆ ದಿನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹೊರತರಲಾಗಿರುವ ವಾಲ್ ಪೋಸ್ಟರ್ ಮತ್ತು ಬ್ಯಾನರ್ ಗಳನ್ನು ಅವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಕುಮಾರ ಯರಗಲ, ಆರ್
ಸಿ. ಎಚ್. ಅಧಿಕಾರಿ ಡಾ. ಮಹೇಶ ನಾಗರಬೆಟ್ಟ, ಡಾ. ಈರಣದಣ ಎನ್. ಧಾರವಾಡಕರ, ಡಾ. ತಾಳಿಕೋಟಿ, ಡಾ. ಇಂಗಳೆ, ಸುರೇಶ ಹೊಸಮನಿ, ಜಿ.‌ ಎಂ.‌ ಕೋಲೂರ್ಲ, ಆರ್. ಎನ್. ಹಂಚಿನಾಳ, ಸಾವಿತ್ರಿ ಹಿಪ್ಪರಗಿ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌