4.2 ಕಿ.ಮೀ. ಸೈಕಲ್ ತುಳಿದು ಸೈಕಲ್ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವ ಡಾ. ಆಶ್ವತ್ಥ ನಾರಾಯಣ
ಬೆಂಗಳೂರು: ಸುಸ್ಥಿರ ಪರಿಸರ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಉತ್ತೇಜಿಸುವ ಸಲುವಾಗಿ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಏರ್ಪಡಿಸಿದ್ದ ಸೈಕಲ್ ದಿನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕ ಮತ್ತು ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂದುವರಿದ ಅನೇಕ ದೇಶಗಳಲ್ಲಿ ಪರಿಸರ ಹಾಗೂ ಆರೋಗ್ಯ ಕಾಳಜಿಯಿಂದಾಗಿ ಸೈಕಲ್ ಸವಾರಿ ಜನಪ್ರಿಯವಾಗುತ್ತಿದೆ. ಇದನ್ನು ಉತ್ತೇಜಿಸಲು ಬೆಂಗಳೂರಿನಲ್ಲಿ ಪ್ರತ್ಯೇಕ ಸೈಕಲ್ ಪಥಗಳೇ ಇತ್ತೀಚಿಗೆ ನಿರ್ಮಾಣವಾಗುತ್ತಿವೆ ಎಂದು ಸಚಿವರು ಹೇಳಿದರು. ಸಣ್ಣ ಪುಟ್ಟ ಕಾರ್ಯಗಳನ್ನು ನಡಿಗೆಯ […]
ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ- ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಆರ್. ಟಿ. ನಗರದ ನಿವಾಸದಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಕೇರಳ ರಾಜ್ಯದಿಂದ ಬರುವವರಲ್ಲಿ ಸೋಂಕು ಹರಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. ಕೇರಳದಿಂದ ಬಂದಿರುವ ಅರೆವೈದ್ಯಕೀಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಕೇರಳ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮಡಿಕೇರಿ, ಚಾಮರಾಜನಗರ, ಮೈಸೂರು ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಆರ್ ಟಿ ಪಿ […]
ಮಾನವಸಹಿತ ಗಗನಯಾನ ಯೋಜನೆ ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಬೇಡ- ಪ್ರಧಾನಿ, ಸಿಎಂ ಗೆ ಡಿ. ಕೆ. ಶಿವಕುಮಾರ ಪತ್ರ
ಬೆಂಗಳೂ: ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಕೇಂದ್ರ ಸತಕಾರದ ಕ್ರಮ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರ ಇಂತಿದೆ. ಸನ್ಮಾನ್ಯ ಪ್ರಧಾನಮಂತ್ರಿಗಳಿಗೆ, ಇಸ್ರೋ ಸಂಸ್ಥೆಯ ಮಹತ್ವಾಕಾಂಕ್ಷಿ ಭಾರತೀಯ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿ ವಿನಂತಿ. ನಿಮ್ಮ […]
ಕೊರೊನಾ ಒಮಿಕ್ರಾನ್ ಪ್ರಭೇದಾತಂಕ- ಬಸವ ನಾಡಿನ ಮಹಾರಾಷ್ಟ್ರದ ಗಡಿಯಲ್ಲಿ ಕಟ್ಟೆಚ್ಚರ
ವಿಜಯಪುರ: ವಿಶ್ವಾದ್ಯಂತ ಸಂಚಲ ಸೃಷ್ಠಿಸಿರುವ ಕೊರೊನಾ ಹೊಸ ಪ್ರಭೇದ ಒಮಿಕ್ರಾನ್ ರಾಜ್ಯದಲ್ಲಿಯೂ ಆತಂಕ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಹಾರಾಷ್ಟ್ರಮ ಮತ್ತು ಕೇರಳದಿಂದ ಬರುವ ಜನರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಕೊರೊನಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ. ಇದರ ಅಂಗವಾಗಿ ಗಡಿ ಜಿಲ್ಲೆಗಳಲ್ಲಿಯೂ ರಾಜ್ಯ ಸರಕಾರ ಕಟ್ಟೆಚ್ಚರಕ್ಕೆ ಸೂಚನೆ ನೀಡಿದ್ದು, ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿಯೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಮೂರು ತಾಲೂಕುಗಳಲ್ಲಿ ಬಿಗೀ ಬಂದೋಬಸ್ತ್ ಮಾಡಲಾಗಿದೆ. ತಿಕೋಟಾ, ಚಡಚಣ ಮತ್ತು […]