ಕೊರೊನಾ ಒಮಿಕ್ರಾನ್ ಪ್ರಭೇದಾತಂಕ- ಬಸವ ನಾಡಿನ ಮಹಾರಾಷ್ಟ್ರದ ಗಡಿಯಲ್ಲಿ ಕಟ್ಟೆಚ್ಚರ

ವಿಜಯಪುರ: ವಿಶ್ವಾದ್ಯಂತ ಸಂಚಲ ಸೃಷ್ಠಿಸಿರುವ ಕೊರೊನಾ ಹೊಸ ಪ್ರಭೇದ ಒಮಿಕ್ರಾನ್ ರಾಜ್ಯದಲ್ಲಿಯೂ ಆತಂಕ ಸೃಷ್ಠಿಸಿದೆ.  ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮಹಾರಾಷ್ಟ್ರಮ ಮತ್ತು ಕೇರಳದಿಂದ ಬರುವ ಜನರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಕೊರೊನಾ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಿದೆ.

ಇದರ ಅಂಗವಾಗಿ ಗಡಿ ಜಿಲ್ಲೆಗಳಲ್ಲಿಯೂ ರಾಜ್ಯ ಸರಕಾರ ಕಟ್ಟೆಚ್ಚರಕ್ಕೆ ಸೂಚನೆ ನೀಡಿದ್ದು, ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿಯೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ.  ವಿಜಯಪುರ ಜಿಲ್ಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಮೂರು ತಾಲೂಕುಗಳಲ್ಲಿ ಬಿಗೀ ಬಂದೋಬಸ್ತ್ ಮಾಡಲಾಗಿದೆ.  ತಿಕೋಟಾ, ಚಡಚಣ ಮತ್ತು ಇಂಡಿ ತಾಲೂಕುಗಳಲ್ಲಿ ಗಡಿಗೆ ಹೊಂದಿಕೊಂಡಿರುವ ರಸ್ತೆಗಳಲ್ಲಿ ತಪಾಸಣೆ ಕೇಂದ್ರಗಳನ್ನು ತೆರೆಯಲಾಗಿದೆ.

ನೆರೆಯ ಮಹಾರಾಷ್ಟ್ರದಿಂದ ಜನಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಭೀತಿ ಮತ್ತೆ ಶುರವಾಗಿದೆ.  ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.  ಈ ಹಿನ್ನೆಲೆಯಲ್ಲಿ ನೆರೆಯ ಮಹಾರಾಷ್ಟ್ರದೊಂದಿಗೆ ವಿಜಯಪುರ ಜಿಲ್ಲೆಗೆ ಹೊಂದಿಕೊಂಡ ಮೂರು ತಾಲೂಕುಗಳ ಗಡಿ ಭಾಗಗಳಲ್ಲಿ ಒಟ್ಟು 11 ನಾನಾ ಭಾಗಗಳಲ್ಲಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಒಟ್ಟು 11 ಕಡೆಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ.  ತಿಕೋಟಾ ತಾಲೂಕಿನಲ್ಲಿ ಮೂರು ಕಡೆ, ಚಡಚಣ ತಾಲೂಕಿನಲ್ಲಿ ಆರು ಕಡೆ ಮತ್ತು ಇಂಡಿ ತಾಲೂಕಿನ ಎರಡು ಕಡೆ ಚೆಕ್ ಪೋಸ್ಚ್ ತೆರೆಯಲಾಗಿದೆ.  ತಿಕೋಟಾ ತಾಲೂಕಿನ ಕನಮಡಿ, ಅಳಗಿನಾಳ, ಸಿದ್ದಾಪುರ(ಎ) ಗ್ರಾಮಗಳ ಗಡಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ.  ಅದರಂತೆ, ಚಡಚಣ ತಾಲೂಕಿನ ಚಡಚಣ, ಶಿರಾಡೋಣ, ಉಮರಜ, ಉಮರಾಣಿ, ಧೂಳಖೇಡ, ಕನಕನಾಳ ಬಳಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ. ಮತ್ತೋಂದೆಡೆ ಇಂಡಿ ತಾಲೂಕಿನ ಹಿಂಗಣಿ, ಅಗರಖೇಡ ಕ್ರಾಸ್ ನಲ್ಲಿಯೂ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.

ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತಿದೆ.  ವಿಜಯಪುರ ಜಿಲ್ಲೆಯ ಧೂಳಖೇಡ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತ್ತಿದ್ದು, ವಿಜಯಪುರ ಜಿಲ್ಲಾಡಳಿತದಿಂದ ಮೂರು ಶಿಫ್ಟ್ ಗಳಲ್ಲಿ ಕರ್ತವ್ಯಕ್ಕೆ ನಿರ್ವಹಣೆಗೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.  ಕಂದಾಯ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸಿಬ್ಬಂದಿ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳನ್ನೂ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ.

 

ಕರ್ನಾಟಕದ ಗಡಿ ಪ್ರವೇಶಿಸುವ ಪ್ರತಿಯೊಬ್ಬರು ಕೊರೊನಾ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು.  ಕೋವಿಡ್ ನ ಎರಡು ಡೋಸ್ ಪಡೆದಿರಬೇಕು.  ಜ್ವರ, ಕೆಮ್ಮು, ನೆಗಡಿ, ಉಸಿರಾಟ ಸಮಸ್ಯೆ ಸೇರಿದಂತೆ ಕೊರೊನಾದ ಯಾವುದೇ ಲಕ್ಷಣಗಳನ್ನು ಹೊಂದಿರಬಾರದ.  ಬೇರೆ ರಾಜ್ಯಗಳಿಂದ ಬರುವ ಜನರು ತಮ್ಮ ಮನೆಯಲ್ಲೇ ಇರಬೇಕು.  ಯಾರೊಂದಿಗೂ ಬೆರೆಯಬಾರದು.  ಈ ಮೂಲಕ ಸ್ವಂಪ್ರೇರಿತವಾಗಿ ಕೋವಿಡ್ ನಿಮಯಗಳನ್ನು ಪಾಲಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 

Leave a Reply

ಹೊಸ ಪೋಸ್ಟ್‌