ಬಸವ ನಾಡಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ ಆಚರಣೆ

ವಿಜಯಪುರ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 65 ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.

 

 

ವಿಜಯಪುರ ನಗತದಲ್ಲಿರುವ ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣ ಆವರಣದಲ್ಲಿರುವ ಡಾ. ಬಿ. ಆರ್ ಅಂಬೇಡ್ಕರ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಸ್ಪಿ ಎಚ್ . ಡಿ. ಆನಂದಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಣಾಧಿಕಾರಿ ಗೋವಿಂದ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸೋಮನಗೌಡ ಕನ್ನೊಳ್ಳಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿಎಸ್ಎಸ್ ಮುಖಂಡರಾದ ಅಡಿವೆಪ್ಪ ಸಾಲಗಲ, ರಮೇಶ ಆಸಂಗಿ, ಸಿದ್ದು ರಾಯಣ್ಣನವರ, ಪೀರಪ್ಪ ನಡುವಿನಮನಿ, ಆನಂದ ಔದಿ, ಬಟಗಿ, ಅನಿಲ ಹೊಸಮನಿ, ಮಾನಕರ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಸಂಘಟನೆಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌