ವಿಜಯಪುರ: ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ತಮ್ಮಗೆಲುವು ಖಚಿತ ಎಂದು ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಲೋಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಾದರಿಯಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿ ಮತ್ತು ಎಸ್ಪಿಯವರಿಗೆ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.
ಅಶಕ್ತರು, ಅಂಧರು ಮತ್ತು ಅಂಗವಿಕಲರ ಮತದಾನ ದುರುಪಯೋಗವಾಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತಿ ಸದಸ್ಯರಿಗೆ ಪ್ರಥಮ ಪ್ರಾಶಸ್ತ್ಯ ಮತದ ಕುರಿತು ಚುಬಾವಣೆ ಆಯೋಹ ತಿಳುವಳಿಕೆ ನೀಡಬೇಕು. ಕೆಲವೊಂದು ಕಡೆ ಪಿಡಿಓಗಳು ಪ್ರಚಾರ ಮಾಡುತ್ತಿದ್ದಾರೆ. ಇದು ನನ್ನ ಗಮನಕ್ಕೆ ಬಂದಿದೆ. ನಮ್ಮ ಎದುರಾಳಗಳು ರಾಷ್ಟ್ರೀಯ ಪಕ್ಷಗಳ, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಪ್ರಭಾವಿ ಅಭ್ಯರ್ಥಿಗಳಾಗಿರುವುದರಿಂದ ಮತದಾನದ ಸಮಯದಲ್ಲಿ ಸದರಿಯವರ ಪ್ರಭಾವ ಮತ್ತು ದುರುಪಯೋಗ ಆಗುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಪೂರಕ ತಯಾರಿ ಮಾಡಿಕೊಳ್ಳಲಾಗಿದೆ. ಆ ವ್ಯವಸ್ಥೆಯನ್ನು ವಿಜಯಪುರ ಮತಕ್ಷೇತ್ರದಲ್ಲೂ ಅಳವಡಿಸಿಕೊಳ್ಳಬೇಕು ಎಂದಯ ಮನವಿ ಮಾಡಿದರು.
ತಾವು ಮತದಾರರ ಅಭಿಪ್ರಾಯ ಪಡೆದೆ ಚುನಾವಣೆಯ ಕಣದಲ್ಲಿ ಸ್ಪರ್ಧೆ ಮಾಡಿರುವುದಾಗಿ ತಿಳಿಸಿದ ಅವರು, ಮತದಾನ ಮಾಎಉವ ಸದಸ್ಯರು ತಮಗೆ ಪ್ರಥಮ ಪ್ರಾಶಸ್ತ್ಯ ಮತ ನೀಡಲು ಮನವಿ ಮಾಡಿದರು.
ಗ್ರಾಮ ಪಂಚಾಯತಿ ಸದಸ್ಯರ ಕಷ್ಟಗಳಿಗೆ ಸ್ಪಂದಿಸಬೇಕಿತ್ತು. ಆದರೆ, ತಾವು ಸ್ಪಂಧಿಸಲಿಲ್ಲ. ಈಗ ಚುನಾವಣೆಯ ಹೊಸ್ತಿಲಲ್ಲಿ ಹೇಳುತ್ತಿದ್ದೀರಿ ಎಂದು ಆರೋಪಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ನ್ಯಾಯದ ಕಗ್ಗೊಲೆ ಆಗಿದೆ. ಇವತ್ತು ಮತದಾರರು ನನ್ನ ಬೆಂಬಲಕ್ಕಾಗಿ ನಿಂತಿದ್ದಾರೆ. ಸ್ಥಳೀಯ ಸಂಘ ಸಂಸ್ಥೆಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಸದಸ್ಯತ್ವ ಹೊಂದಿದ್ದೇನೆ. ಮತದಾರರ ಅಭಿಪ್ರಾಯದಂತೆ ಚುನಾವಣೆಗೆ ಸ್ಪರ್ಧಿಸಿದ್ದೇನೆ. ನನ್ನ ಗೆಲುವು ನೂರಕ್ಕೆ ನೂರರಷ್ಟು ನಿಶ್ಚಿತ ಎಂದು ಮಲ್ಲಿಕಾರ್ಜುನ ಲೋಣಿ ಹೇಳಿದರು.
ಈ ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯ ಎಂ. ಎಚ್. ಪಠಾಣ, ಸತೀಶ ಸಜ್ಜನ, ನಿಂಗಪ್ಪ ಕೊಂಡಗೂಳಿ ಉಪಸ್ಥಿತರಿದ್ದರು.