ಐದು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವೆ- ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ತಾವು 5000 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸುವುದಾಗಿ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಪಿ. ಎಚ್. ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮತದಾರರು ಪ್ರೀತಿ ಮತ್ತು ವಾತ್ಸಲ್ಯದಿಂದ ಬೆಂಬಲಿಸುವುದಾಗಿ ವಾಗ್ದಾನ ಮಾಡಿದ್ದಾರೆ.  ಹೀಗಾಗಿ ತಾವು ಪ್ರಥಮ ಪ್ರಾಶಸ್ತ್ಯಗಳ 5000 ಸಾವಿರ ಮತಗಳ ಅಂತರದಿಂದ ಜಯಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ನಾನು ಕಾನೂನು ಪದವೀಧರನಾಗಿದ್ದು, ವಿಧಾನ ಸಭೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ […]

ವಿಪ ಚುನಾವಣೆ: ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ- ಚಿಮ್ಮನಕಟ್ಟಿ ಅವರಿಗೆ ವಯಸ್ಸಾಗಿದೆ- ಮಾಜಿ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯದಲ್ಲಿ ಸ್ಪರ್ಧಿಸಿರುವ ಎಲ್ಲ ವಿಧಾನ ಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ.  ಮೈಸೂರಿನಿಂದ ಹಿಡಿದು ಬೀದರ್ ವರೆಗೆ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗ ಗೆಲುವು ಖಚಿತವಾಗಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಸದುದ್ದೇಶದಿಂದ ಪಂಚಾಯಿತಿ ರಾಜ್ ವ್ಯವಸ್ಥೆ ಜಾರಿಗೆ ಬಂದಿದೆ.  ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರು ಅಧಿಕಾರದಲ್ಲಿದ್ದಾಗ ಹಳ್ಳಿಗಳ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದ್ದರು ಎಂದು ಅವರು ತಿಳಿಸಿದರು. ಮಾಜಿ […]