ಐದು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುವೆ- ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ತಾವು 5000 ಮತಗಳ ಭಾರಿ ಅಂತರದಿಂದ ಗೆಲುವು ಸಾಧಿಸುವುದಾಗಿ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಪಿ. ಎಚ್. ಪೂಜಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮತದಾರರು ಪ್ರೀತಿ ಮತ್ತು ವಾತ್ಸಲ್ಯದಿಂದ ಬೆಂಬಲಿಸುವುದಾಗಿ ವಾಗ್ದಾನ ಮಾಡಿದ್ದಾರೆ.  ಹೀಗಾಗಿ ತಾವು ಪ್ರಥಮ ಪ್ರಾಶಸ್ತ್ಯಗಳ 5000 ಸಾವಿರ ಮತಗಳ ಅಂತರದಿಂದ ಜಯಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

ನಾನು ಕಾನೂನು ಪದವೀಧರನಾಗಿದ್ದು, ವಿಧಾನ ಸಭೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ,  ರಾಷ್ಟ್ರೀಯ ಪಕ್ಷದ  ಒಮ್ಮತದ ಅಭ್ಯರ್ಥಿಯಾಗಿದ್ದೇವೆ.  ಹೀಗಾಗಿ, ಯಾವುದೇ ನ್ಯೂನತೆ, ಬೇಧ ಬಾವ ಮಾಡದೆ ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಮುಖಂಡರು ಭಾಗಿಯಾಗಿದ್ದಾರೆ.  ಉಭಯ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ, ಉತ್ಸಾಹಿ ತಂಡಗಳನ್ನು ನೋಡಿದ್ದು ವಿಶೇಷ ಅನುಭವ ಉಂಟು ಮಾಡಿದೆ ಎಂದು ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅನುಷ್ಠಾನಗೊಂಡ ಕಾರ್ಯಗಳು ಮತದಾರರ ಗಮನಕ್ಕಿವೆ.  ಹೀಗಾಗಿ ಮತದಾರರು ಬಿಜೆಪಿ ಪರ ಒಲವು ಹೊಂದಿರುವದಾಗಿ ತಿಳಿಸಿದರು.  ಪ್ರಥಮ ಪ್ರಾಶಸ್ತ್ಯದ 5000 ಮತಗಳ ಅಂತರದಿಂದ ಜಯದ ವಿಶ್ವಾಸ ಇದೆ.  ಚುನಾವಣೆಯಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಅಭಿವೃದ್ಧಿ ಮಾಡಲು ಗ್ರಾಮ ಪಂಚಾಯತಿಗೆ ನೇರವಾಗಿ ಹಣ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.  ಗ್ರಾಮ ಪಂಚಾಯಿತಿ ಸದಸ್ಯರಿಗೆ ಸರಕಾರ ಅನುದಾನ ನೀಡಿದ‌ ಕೀರ್ತಿ ನಮ್ಮ ಸರಕಾರದ್ದಾಗಿದೆ ಎಂದು ತಿಳಿಸಿದರು.

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಚಾರ ಸಭೆಗಳಲ್ಲಿ ಭಾಗವಹಿಸದೇ ಇರುವ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಪಿ. ಎಚ್. ಪೂಜಾರ, ಬಿಜೆಪಿ ಶಾಸಕ ಬಸವಗೌಡ ಪಾಟೀಲ ಯತ್ನಾಳ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.  ಪ್ರಚಾರಕ್ಕೆ ಬಂದಿಲ್ಲ ಎನ್ನುವನ್ನು ಬಿಟ್ಟರೆ ಅವರು ಎಲ್ಲ ಕಡೆಗಳಲ್ಲಿ ಪ್ರಚಾರ ಮಾಡಿದ್ದಾರೆ.  ತೊರವಿ ಗ್ರಾಮ ಪಂಚಾಯಿತಿ ಒಂದೇ ವಿಜಯುಪುರ ನಗರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಇರುವುದರಿಂದ ಎಲ್ಲ ಮತದಾರರಿಗೆ ಪ್ರಚಾರದ ಸಭೆಗೆ ಅವರೇ ಕಳುಹಿಸಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಗೋಷ್ಠಿಯಲ್ಲಿ ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ,  ಮುಖಂಡರಾದ ವಿಜುಗೌಡ ಪಾಟೀಲ, ಅಶೋಕ ಅಲ್ಲಾಪುರ, ರಾಜು ಮಗಿಮಠ, ಮಾಜಿ ಸಚಿವ ಎಸ್. ಕೆ. ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌