ಇಂಡಿಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ್ ಮತದಾನ- ಕಾಂಗ್ರೆಸ್ ಅಭ್ಯರ್ಥಿ ಸುನಿಲಗೌಡ ಪಾಟೀಲ ಗೆಲುವು ಖಚಿತ ಎಂದ ಇಂಡಿ ಶಾಸಕ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಗೆ ಮತದಾನ ಬಿರುಸಿನಿಂದ ಸಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ಪುರಸಭೆ ಮತಗಟ್ಟೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತದಾನದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಸುನಿಲಗೌಡ ಪಾಟೀಲ ಅತೀ ಹೆಚ್ಚು ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆದು ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ, ಇಂಡಿ […]

ವಿಪ ಚುನಾವಣೆ: ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಶೇ. 99.86 ರಷ್ಟು ಮತದಾನ

ವಿಜಯಪುರ: ವಿಜಯಪುರ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶೇ. 99 86ರಷ್ಟು ಮತದಾನವಾಗಿದೆ. ಈ ಚುನಾವಣೆಯಲ್ಲಿ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಒಟ್ಟು 7363 ಮತದಾರರಿದ್ದು ಅವರಲ್ಲಿ 7353 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.  10 ಜನ ಮತದಾರರು ಮತದಾನ ಮಾಡಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 3931 ಮತದಾರರಲ್ಲಿ 3926 ಸದಸ್ಯರು ನಮ್ಮ ಹಕ್ಕು ಚಲಾಯಿಸಿದ್ದು ಶೇ. 99.87 ರಷ್ಟು ಮತದಾನವಾಗಿದೆ.  ಬಾಗಲಕೋಟೆ ಜಿಲ್ಲೆಯಲ್ಲಿ 3432 […]

ಆಲಮಟ್ಟಿಯಲ್ಲಿ 24 ಸದಸ್ಯರಿಂದ ಒಟ್ಟಾಗಿ ಬಂದು ಮತ ಚಲಾವಣೆ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಆಲಮಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 26 ಜನ ಸದಸಸ್ಯರಲ್ಲಿ 24 ಜನ ಸದಸ್ಯರು ಗ್ರಾಮ ಪಂಚಾಯಿತಿಯ ಮತಗಟ್ಟೆಗೆ ಬಂದು ತಮ್ಮ ಮತ ಚಲಾಯಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದ್ದಾರೆ. […]

ಸಿಂದಗಿಯಲ್ಲಿ ಮತದಾನ ಮಾಡಿದ ಶಾಸಕ ರಮೇಶ ಭೂಸನೂರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ಮತದಾನ ಮಾಡಿದ್ದಾರೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸಿಂದಗಿ ಪುರಸಭೆ ಮತಗಟ್ಟೆಯಲ್ಲಿ ಬಿಜೆಪಿ ಶಾಸಕ ರಮೇಶ ಭೂಸನೂರ ತಮ್ಮ ಹಕ್ಕು ಚಲಾಯಿಸಿದರು.

ಒಟ್ಟಿಗೆ ಬಂದು ಮತ ಚಲಾಯಿಸಿದ ಅರಕೇರಿ ಗ್ರಾಮ ಪಂಚಾಯಿತಿಯ 28 ಜನ ಸದಸ್ಯರು

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಒಟ್ಟಾಗಿ ಬಂದು ತಮ್ಮ ಮತ ಚಲಾಯಿಸಿ ಗಮನ ಸೆಳೆದಿದ್ದಾರೆ. ವಿಜಯಪುರ ತಾಲೂಕಿನ ಅರಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ ಸದಸ್ಯರು ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಅರಕೇರಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 29 ಜನ ಸದಸ್ಯರಿದ್ದು, ಅವರಲ್ಲಿ ಓರ್ವ ಸದಸ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪುಣೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 28 ಜನ ಸದಸ್ಯರು ಅರಕೇರಿ […]

ಮತದಾನ ಮಾಡಿದ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಸವಣೆ ಶಾಂತಿಯುತವಾಗಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಪುರಸಭೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚಡಚಣದಲ್ಲಿ ಮತದಾನ ಮಾಡಿದ ನಾಗಠಾಣ ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯ ಮತದಾನ ಶಾಂತಿಯುತವಾಗಿದೆ. ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಕೂಡ ತಮ್ಮ ಮತ ಚಲಾಯಿಸಿದ್ದಾರೆ. ಚಡಚಣ ಪಟ್ಟಣ ಪಂಚಾಯಿತಿ ಮತಗಟ್ಟೆಗೆಯಲ್ಲಿ ಶಾಸಕ ಡಾ. ದೇವಾನಂದ ಚವ್ಹಾಣ ಮತದಾನ ಮಾಡಿದರು.

ಮ.2 ಗಂ. ವರೆಗೆ ಶೇ. 57.98 ರಷ್ಟು ಮತದಾನ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಧಾನ ಪರಿಷತ ಚುನಾವಣೆಯಲ್ಲಿ ವಿಜಯಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮ.2ರ ವರೆಗೆ ಶೇ. 57.98 ರಷ್ಟು ಮತದಾನ ದಾಖಲಾಗಿದೆ. ವಿಜಯಪುರ ಮತ್ತು 57.98 ರಷ್ಟು ಮತದಾನ ದಾಖಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಸಂ. 4 ಗಂಟೆಯ ವರೆಗೆ ಮತದಾನ ನಡೆಯಲಿದೆ.

ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟಿಗೆ ಬಂದು ಮತ ಚಲಾಯಿಸಿದ 14 ಜನ ಸದಸ್ಯರು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಮತದಾನ ಭರದಿಂದ ಸಾಗಿದೆ. ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟು 22 ಜನ ಸದಸ್ಯರಲ್ಲಿ 14 ಜನರ ಜನ ಒಟ್ಟಿಗೆ ಬಂದು ತಮ್ಮ ಮತ ಚಲಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಛಾಯಾಗೋಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮತಗಟ್ಟೆಗೆ ಆಗಮಿಸಿದ 14 ಸದಸ್ಯರು ತಮ್ಮ ಮತ ಚಲಾಯಿಸಿದ್ದಾರೆ.

ಶಾಸಕ ಎ. ಎಸ್ ಪಾಟೀಲ ನಡಹಳ್ಳಿ ಮತದಾನ- ಬಿಜೆಪಿ ಪಿ. ಎಚ್. ಪೂಜಾರ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಶಾಸಕ

ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಿಜೆಪಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಪುರಸಭೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1100 ಮತದಾರರಿದ್ದು, ಅವರಲ್ಲಿ ಬಿಜೆಪಿ ಅಭ್ಯರ್ಥಿ […]