ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟಿಗೆ ಬಂದು ಮತ ಚಲಾಯಿಸಿದ 14 ಜನ ಸದಸ್ಯರು

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ವಿಧಾನ ಪರಿಷತ್ ದ್ವಿಸದಸ್ಯ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯ ಮತದಾನ ಭರದಿಂದ ಸಾಗಿದೆ.

ದೇವರ ಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮ ಪಂಚಾಯತಿಯಲ್ಲಿ ಒಟ್ಟು 22 ಜನ ಸದಸ್ಯರಲ್ಲಿ 14 ಜನರ ಜನ ಒಟ್ಟಿಗೆ ಬಂದು ತಮ್ಮ ಮತ ಚಲಾಯಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಛಾಯಾಗೋಳ ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮತಗಟ್ಟೆಗೆ ಆಗಮಿಸಿದ 14 ಸದಸ್ಯರು ತಮ್ಮ ಮತ ಚಲಾಯಿಸಿದ್ದಾರೆ.

Leave a Reply

ಹೊಸ ಪೋಸ್ಟ್‌